‘ಆರಾಮ್ ಅರವಿಂದ್ ಸ್ವಾಮಿ’ಗೆ ಜತೆಯಾದ ಮಿಲನಾ ನಾಗರಾಜ್ …

Aaram Aravindaswamy (3) - Final
Published on

ಬೆಂಗಳೂರು: ಅನೀಶ್​ಗೆ ನಾಯಕಿ ಯಾರಾಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಆದರೆ, ಅನೀಶ್​ ಆಗಲೀ, ನಿರ್ದೇಶಕ ಅಭಿಷೇಕ್​ ಶೆಟ್ಟ ಆಗಲೀ ನಾಯಕಿ ಯಾರಾಗಬಹುದೆಂಬ ರಹಸ್ಯವನ್ನು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರತಂಡದವರಿಂದಲೇ ನಾಯಕಿಯ ಬಗ್ಗೆ ಅಧಿಕೃತವಾಗಿ ಹೊರಬಿದ್ದಿದೆ.

‘ಆರಾಮ್ ಅರವಿಂದ್ ಸ್ವಾಮಿ’ ಒಂದು ರೊಮ್ಯಾಂಟಿಕ್​ ಕಾಮಿಡಿ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಅನೀಶ್​ ತೇಜೇಶ್ವರ್​ಗೆ ನಾಯಕಿಯಾಗಿ ಮಿಲನಾ ನಾಗರಾಜ್​ ಚಿತ್ರತಂಡ ಸೇರ್ಪಡೆಯಾಗಿದ್ದಾರೆ. ಈಗಾಗಲೇ ಅವರ ಭಾಗದ ಚಿತ್ರೀಕರಣ ಸಹ ನಡೆದಿದೆ. ಮಲಯಾಳಿ ಟೀಚರ್​ ಆಗಿ ಮಿಲನಾ ಈ ಚಿತ್ರದಲ್ಲಿ ನಟಿಸುತ್ತಿದ್ದಾರಂತೆ.

ಈ ಹಿಂದೆ ‘ನಮ್ ಗಣಿ ಬಿಕಾಂ ಪಾಸ್’ ಮತ್ತು ‘ಗಜಾನನ ಅಂಡ್ ಗ್ಯಾಂಗ್’ ಚಿತ್ರಗಳನ್ನು ನಿರ್ದೇಶಿಸಿದ್ದ ಅಭಿಷೇಕ್​ ಶೆಟ್ಟಿ, ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಸಹ ಅವರದ್ದೇ. ಈ ಹಿಂದೆ 'ಅಕಿರ' ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ, 'ಗುಳ್ಟು' ನಿರ್ಮಿಸಿದ್ದ ಪ್ರಶಾಂತ್ ರೆಡ್ಡಿ, ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಈಗಾಗಲೇ ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಎರಡನೆಯ ಹಂತದ ಚಿತ್ರೀಕರಣ ಶುರುವಾಗಲಿದೆಯಂತೆ. ಸದ್ಯದಲ್ಲೇ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಲಿದೆಯಂತೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net