

ಬೆಂಗಳೂರು: ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ "ಪದವಿಪೂರ್ವ" ಚಿತ್ರಕ್ಕೆ ನಾಯಕಿಯಾಗಿ ಅಂಜಲಿ ಅನೀಶ್ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ನಟಿ ತಮನ್ನಾ ಭಾಟಿಯಾ ಆಸ್ಪತ್ರೆಗೆ ದಾಖಲು
ಶಿಕಾಗೋದ ಸೆಕೆಂಡ್ ಸಿಟಿ ಆಕ್ಟಿಂಗ್ ಸ್ಕೂಲ್ ಹಾಗೂ ಅನುಪಮ್ ಖೇರ್ ಆಕ್ಟಿಂಗ್ ಸ್ಕೂಲ್ನಲ್ಲಿ ನಟನೆಯ ತರಬೇತಿಯನ್ನು ಪಡೆದುಕೊಂಡಿದ್ದು ಕೆಲ ಬಾಲಿವುಡ್ ಮತ್ತು ಕನ್ನಡ ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿಯೂ ಸಹ ಕೆಲಸ ಮಾಡಿದ್ದಾರೆ.
ಚಿತ್ರದ ನಾಯಕ ಪೃಥ್ವಿ ಶಾಮನೂರ್ಗೂ ಇದು ಚೊಚ್ಚಲ ಸಿನಿಮಾ ಆಗಿದ್ದು, ಅವರಿಗೆ ಅಂಜಲಿ ಜೋಡಿಯಾಗಲಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಹಾಗೂ ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಇರಲಿದೆ.
ಹದಿಹರೆಯದ ಮೋಜು, ಮಸ್ತಿ, ಮೋಹ, ಸ್ನೇಹಗಳ ಕುರಿತಾದ ಕಥೆ ಇದಾಗಿದ್ದು ಚಿತ್ರವನ್ನು ಮಲೆನಾಡಿನ ಅತ್ಯಂತ ಸುಂದರ ತಾಣಗಳಲ್ಲಿ ಚಿತ್ರೀಕರಿಸುವ ಯೋಜನೆ ಇದೆ. ಉಳಿದಂತೆ ಬೇರೆ ಪಾತ್ರಗಳನ್ನು ಆಡಿಶನ್ ಮೂಲಕ ಆಯ್ಕೆ ಮಾಡಲಾಗಿದ್ದು, ಮತ್ತಷ್ಪು ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುವ ಹಾದಿಯಲ್ಲಿ ತಂಡ ಕೆಲಸ ಮಾಡುತ್ತಿದೆ.