ನಟಿಗೆ ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ನಿರ್ದೇಶಕ ರಂಜಿತ್ ಪೊಲೀಸರ ವಶಕ್ಕೆ! Ranjith Balakrishnan

ಮಲಯಾಳಂ ನಿರ್ದೇಶಕ Ranjith Balakrishnan (ಚಿತ್ರ ಪಿಟಿಐ)
ಮಲಯಾಳಂ ನಿರ್ದೇಶಕ Ranjith Balakrishnan (ಚಿತ್ರ ಪಿಟಿಐ)
Published on
ಕೊಚ್ಚಿ: ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಟನ್​ (Ranjith Balakrishnan) ಅವರನ್ನು ಮಂಗಳವಾರ (ಮಾ.31) ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ರಂಜಿತ್​ ನಿಗದಿತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಪಟ್ಟಣದಲ್ಲಿ ಪ್ರಯಾಣಿಸುತ್ತಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಇಡುಕ್ಕಿ ಪೊಲೀಸ್ ವರಿಷ್ಠಾಧಿಕಾರಿಯ ಸೂಚನೆಯ ಮೇರೆಗೆ ಸಾರ್ವಜನಿಕರಿಗೆ ಯಾವುದೇ ರೀತಿಯ ಅಡಚಣೆಯಾಗದಂತೆ ಈ ಕಾರ್ಯಾಚರಣೆಯನ್ನು ಅತ್ಯಂತ ಗೌಪ್ಯವಾಗಿ ನಡೆಸಲಾಯಿತು.
ಆದಾಗ್ಯೂ, ರಂಜಿತ್ ಅವರನ್ನು ಪ್ರಾಥಮಿಕ ವಿಚಾರಣೆಗಾಗಿ ತೊಡುಪುಳ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಎರ್ನಾಕುಲಂ ಸೆಂಟ್ರಲ್​ ಪೊಲೀಸರಿಗೆ ವರ್ಗಾಹಿಸಿದ್ದಾರೆ. 

ಪ್ರಕರಣದ ಬಗ್ಗೆ

ದೂರಿನ ಪ್ರಕಾರ, ಚಿತ್ರೀಕರಣದ ನಿಗದಿತ ವೇಳಾಪಟ್ಟಿಯ ಸಮಯದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸೆಟ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ನಿರ್ದೇಶಕರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ನಟಿ ಗಂಭೀರ ಆರೋಪ ಮಾಡಿದ್ದಾರೆ. 
ಸಂತ್ರಸ್ತೆ ಪೊಲೀಸರನ್ನು ಸಂಪರ್ಕಿಸುವ ಮೊದಲು, ಚಿತ್ರದ ಆಂತರಿಕ ದೂರು ಸಮಿತಿಗೆ ಔಪಚಾರಿಕವಾಗಿ ದೂರು ಸಲ್ಲಿಸಿದ್ದರು. ನಂತರ ಸಮಿತಿಯು ಈ ವಿಚಾರವನ್ನು ಕೇರಳ ಪೊಲೀಸರಿಗೆ ಹಸ್ತಾಂತರಿಸಿತು.
ಆರೋಪಗಳ ಸೂಕ್ಷ್ಮ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡ ಅಧಿಕಾರಿಗಳು ಈ ವಿಚಾರಣೆಯನ್ನು ಅತ್ಯಂತ ಗೌಪ್ಯತೆಯಿಂದ ನಿರ್ವಹಿಸಲಾಗಿದೆ ಮತ್ತು ಪ್ರಾಥಮಿಕ ವಿಚಾರಣೆಯ ಸೂಕ್ತ ಪ್ರತಿಕ್ರಿಯೆಯನ್ನು ಅನುಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ರಂಜಿತ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳು

 ನ್ಯಾಯಮೂರ್ತಿ ಕೆ. ಹೇಮಾ ಸಮಿತಿಯು ಮಲಯಾಳಂ ಚಿತ್ರರಂಗದಲ್ಲಿನ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ, ಲಿಂಗ ತಾರತಮ್ಯ ಮತ್ತು ದುರ್ನಡತೆಯ ಬಗ್ಗೆ ಸಮಗ್ರ ವರದಿ ನೀಡಿತ್ತು. ಈ ವರದಿ ಬಹಿರಂಗಗೊಂಡ ನಂತರ 2024 ರಲ್ಲಿ, ಬಂಗಾಳಿ ನಟಿಯೊಬ್ಬರಿಗೆ ರಂಜಿತ್ ಕಿರುಕುಳ ನೀಡಿದ್ದಾರೆ ಎಂದು ದೂರು ಸಲ್ಲಿಸಿದ ನಂತರ ಅವರ ವಿರುದ್ಧ ಕೇಸು ದಾಖಲಾಗಿತ್ತು (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net