Pulsar Suni : ಸುಮಾರು 8 ವರ್ಷಗಳ ಹಿಂದೆ ಖ್ಯಾತ ನಟಿಯನ್ನು ಕಿಡ್ನಾಪ್ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಅಂತಿಮ ಘಟ್ಟಕ್ಕೆ ಬಂದಿದೆ. ಈ ಪ್ರಕರಣದಲ್ಲಿ ನಟ ದಿಲೀಪ್ ಹೆಸರು ಕೂಡ ಕೇಳಿಬಂದಿತು. ಹೀಗಾಗಿ ಅವರನ್ನು ತಪ್ಪಿತಸ್ಥರೆಂದು ಕೋರ್ಟ್ ತೀರ್ಪು ನೀಡುತ್ತದೆಯೇ ಎಂದು ಕಾಯುತ್ತಿದ್ದರು. ಆದರೆ, ಈ ಪ್ರಕರಣದಿಂದ ದಿಲೀಪ್ ಅವರನ್ನು ಕೋರ್ಟ್ ಖುಲಾಸೆಗೊಳಿಸಿರುವುದು ಅಚ್ಚರಿ ಮೂಡಿಸಿದೆ. ಆದರೆ, ಪಲ್ಸರ್ ಸುನಿ ಸೇರಿದಂತೆ ಆರು ಆರೋಪಿಗಳನ್ನು ನ್ಯಾಯಾಲಯ ತಪ್ಪಿತಸ್ಥರೆಂದು ಘೋಷಿಸಿದೆ. ಅತ್ಯಾಚಾರ ಸೇರಿದಂತೆ ಅವರ ವಿರುದ್ಧದ ಎಲ್ಲ ಆರೋಪಗಳನ್ನು ಪ್ರಾಸಿಕ್ಯೂಷನ್ ಸಾಬೀತುಪಡಿಸಿದೆ. ಆದ್ದರಿಂದ, ಅವರಿಗೆ ಗರಿಷ್ಠ ಶಿಕ್ಷೆಯಾಗುವ ಸಾಧ್ಯತೆಯಿದೆ. ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಹನಿ ಎಂ ವರ್ಗೀಸ್ ಅವರು ಡಿಸೆಂಬರ್ 12ರ ಶುಕ್ರವಾರ ತೀರ್ಪು ಪ್ರಕಟಿಸಲಿದ್ದಾರೆ.