ಕರೊನಾ ಸೋಂಕಿತರನ್ನು ಅಪರಾಧಿಗಳಂತೆ ನೋಡಬೇಡಿ; ಸುಮಲತಾ ಅಂಬರೀಶ್​ ಮನವಿ

jpg
Published on

ಇತ್ತೀಚೆಗಷ್ಟೇ ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ನಟಿ, ಸಂಸದೆ ಸುಮಲತಾ ಅಂಬರೀಶ್​ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯದ ಬಗ್ಗೆಯೂ ಮಾಹಿತಿ ನೀಡಿದ್ದ ಅವರು, ನಾನು ಕ್ಷೇಮವಾಗಿದ್ದೇನೆ. ಇನ್ನೇನು ಸಾರ್ವಜನಿಕ ಜೀವನಕ್ಕೆ ಮರಳಲಿದ್ದೇನೆ ಎಂದು ಹೇಳಿಕೊಂಡಿದ್ದರು. ಇದರ ಜತೆಗೆ ಕರೊನಾ ಸೋಂಕಿತರನ್ನು ನೋಡುವ ರೀತಿ ಬದಲಾಗಬೇಕು ಎಂದು ಸೋಷಿಯಲ್​ ಮೀಡಿಯಾದಲ್ಲಿ ಸುಮಲತಾ ಮನವಿ ಮಾಡಿದ್ದಾರೆ.

‘ನಾನು ಕರೊನಾದಿಂದ ಗುಣಮುಖ ಆಗಿದ್ದೇನೆ ಎನ್ನುವ ಒಂದು ಸುದ್ದಿ ಹರಿದಾಡುತ್ತಿದೆ. ಆದರೆ, ನಾನು ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ಬಳಿಕವೇ ತಿಳಿಯುವುದು. ಸದ್ಯಕ್ಕೆ ಔಷಧಿ ಹಾಗೂ ಸುಶ್ರುಷೆ ಮುಂದುವರೆದಿದೆ. ನಾನು ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ. ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಆಗುವ ಭರವಸೆ ಇದೆ’ ಎಂದಿದ್ದಾರೆ.

‘ಕರೊನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲ. ಇದು ಒಂದು ಯುದ್ಧ, ಕರೊನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ಮುಖ್ಯವಾಗಿ, ಸೋಕಿತರು ಕ್ವಾರಂಟೈನ್ ಅವಧಿಯನ್ನು ಮತ್ತು ಸರ್ಕಾರದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯ ಹಾಗೂ ಅದು ನಮ್ಮ ಜವಾಬ್ದಾರಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ತಪ್ಪದೆ ಮುಖಕ್ಕೆ ಮಾಸ್ಕ್​ ಧರಿಸುವುದನ್ನ ಮರಿಯಬೇಡಿ’ ಎಂದೂ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net