ಸಂಕ್ರಾಂತಿ ಸಂಭ್ರಮಕ್ಕೆ ಸಜ್ಜಾದ 'ಗಾಜನೂರು'

WhatsApp Image 2021-01-08 at 3.08.46 PM
Published on

ಬೆಂಗಳೂರು: ಜನವರಿ 15 ಸುಗ್ಗಿ ಹಬ್ಬ ಸಂಕ್ರಾಂತಿ. ಈ ಹಬ್ಬದ ಸಂಭ್ರಮದಲ್ಲೇ ಜನವರಿ 16 ರಂದು 'ಗಾಜನೂರು' ಎಂಬ ನೂತನ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕೀರ್ತಿ ಅವರು ಕಥೆ, ಚಿತ್ರಕಥೆ ಬರೆದಿದ್ದು, ವಿಜಯ್ ನಿರ್ದೇಶಿಸುತ್ತಿದ್ದಾರೆ.

ಎಸ್.ಮೋಹನ್, ನಂದಕಿಶೋರ್ ಮುಂತಾದ ನಿರ್ದೇಶಕರ ಬಳಿ ಸಹನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ವಿಜಯ್ ಅವರ ನಿರ್ದೇಶನದ ಮೊದಲ ಚಿತ್ರ 'ಗಾಜನೂರು'. ಮೂಲತಃ ಕಲಬುರಗಿಯವರಾದ ಅವಿನಾಶ್ ತಮ್ಮ ಕೃತಿಕಾ ರಾಮ್ ಮೂವೀಸ್ ಮೂಲಕ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಇದು ಅವರ ನಿರ್ಮಾಣದ ಚೊಚ್ಚಲ ಚಿತ್ರ.

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀಧರ್. ವಿ ಸಂಭ್ರಮ್ ಸಂಗೀತ ನೀಡುತ್ತಿದ್ದಾರೆ. ತನ್ವಿಕ್ ಛಾಯಾಗ್ರಹಣ, ಅಮಿತ್ ಜಾವಾಳ್ಕರ್ ಸಂಕಲನ, ಮಾಸ್ ಮಾದ ಸಾಹಸ ನಿರ್ದೇಶನ ಹಾಗೂ ಭೂಷಣ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಕ್ರಾಂತಿಕುಮಾರ್ ಸಂಭಾಷಣೆ ಬರೆಯುತ್ತಿದ್ದಾರೆ.

ತೀರ್ಥಹಳ್ಳಿ, ಬೆಂಗಳೂರಿನಲ್ಲಿ 35 ದಿನಗಳ ಚಿತ್ರೀಕರಣ ನಡೆಯಲಿದೆ.‌ ಅವತಾರ್, ರವಿಶಂಕರ್, ತಬಲಾನಣಿ, ಕುರಿ ಪ್ರತಾಪ್, ಗೋಪಾಲಕೃಷ್ಣ ದೇಶಪಾಂಡೆ, ಬಾಬು ಹಿರಣ್ಣಯ್ಯ, ತರಂಗ ವಿಶ್ವ, ವಾಣಿ, ಸಂತು ಮುಂತಾದವರು ಈ ಚಿತ್ರದ ‌ತಾರಾಬಳಗದಲ್ಲಿದ್ದಾರೆ. ಇತ್ತೀಚೆಗೆ ಚಿತ್ರತಂಡದ ಸದಸ್ಯರು ಎ ಡಿ ಜಿ ಪಿ ಭಾಸ್ಕರ್ ರಾವ್ ಅವರನ್ನು ಭೇಟಿಯಾಗಿ ಚಿತ್ರ ಆರಂಭ ವಿಷಯ ತಿಳಿಸಿ ಆಶೀರ್ವಾದ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net