ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ ಫಿಕ್ಸ್​; ಖಾಸಗಿ ಹೋಟೆಲ್​ನಲ್ಲಿ ಅದ್ದೂರಿಯಾಗಿ ನಡೆಯಲಿದೆ ಸಮಾರಂಭ

Engagement 3 Feb 20
Published on

ಬೆಂಗಳೂರು: ನಟ ನಿಖಿಲ್​ ಕುಮಾರಸ್ವಾಮಿ ನಿಶ್ಚಿತಾರ್ಥಕ್ಕೆ ದಿನ ನಿಗದಿಯಾಗಿದೆ.

ಫೆ.10ರಂದು ತಾಜ್​ವೆಸ್ಟ್​ ಎಂಡ್ ಹೋಟೆಲ್​ನಲ್ಲಿ ನಿಖಿಲ್​ ಹಾಗೂ ರೇವತಿ ನಿಶ್ಚಿತಾರ್ಥ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಎಂಗೇಜ್​ಮೆಂಟ್​ ಅದ್ದೂರಿಯಾಗಿ ನಡೆಯಲಿದ್ದು ನಿಖಿಲ್​ ಮತ್ತು ರೇವತಿ ಕುಟುಂಬಸ್ಥರು, ರಾಜಕೀಯ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸಮಾರಂಭದಲ್ಲಿ ಸುಮಾರು 5 ಸಾವಿರ ಜನರು ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.(ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net