ಪವನ್ ಕಲ್ಯಾಣ್​​ಗೆ ನಿತ್ಯಾ ಮೆನನ್ ಜೋಡಿ

nithya
Published on

ಮಾಲಿವುಡ್​ನ ‘ಅಯ್ಯಪ್ಪನುಮ್ ಕೋಶಿಯಮ್ ಚಿತ್ರ ತೆಲುಗಿನಲ್ಲಿ ರಿಮೇಕ್ ಆಗುತ್ತಿರುವುದು ಗೊತ್ತಿರುವ ವಿಚಾರ. ಈಗಾಗಲೇ ಈ ಚಿತ್ರದಲ್ಲಿ ಪವನ್ ಕಲ್ಯಾಣ್ ಮುಖ್ಯ ಭೂಮಿಕೆಯಲ್ಲಿ ನಟಿಸುವುದು ಅಧಿಕೃತವಾಗಿದೆ. ಇನ್ನೊಂದು ಪ್ರಮುಖ ಪಾತ್ರದಲ್ಲಿ ರಾಣಾ ದಗ್ಗುಬಾಟಿ ಬಣ್ಣ ಹಚ್ಚುತ್ತಿದ್ದಾರೆ. ಇದೀಗ ಇದೇ ಸಿನಿಮಾಕ್ಕೆ ಸಂಬಂಧಿಸಿದಂತೆ ನಾಯಕಿ ವಿಚಾರ ಮುನ್ನೆಲೆಗೆ ಬಂದಿದೆ. ಪವನ್​ಗೆ ಜೋಡಿಯಾಗಿ ನಿತ್ಯಾ ಮೆನನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಈ ಹಿಂದೆ ಪವನ್​ಗೆ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ, ಆ ಸುದ್ದಿ ನಿಜವಾಗಲಿಲ್ಲ. ಇದೀಗ ನಿತ್ಯಾ ಹೆಸರು ಕೇಳಿಬರುತ್ತಿದೆಯಾದರೂ, ಚಿತ್ರತಂಡ ಇನ್ನಷ್ಟೇ ಅಧಿಕೃತ ಮಾಡಬೇಕಿದೆ. ಸಾಗರ್ ಚಂದ್ರ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಚಿತ್ರವನ್ನು ಸಿತಾರಾ ಎಂಟರ್​ಟೈನ್​ವೆುಂಟ್ ಬ್ಯಾನರ್​ನಲ್ಲಿ ನಿರ್ಮಾಣ ಮಾಡ ಲಾಗುತ್ತಿದೆ. -ಏಜೆನ್ಸೀಸ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net