ಕುಟುಂಬ ಮತ್ತು ಸ್ನೇಹಿತರ ಸಮ್ಮುಖದಲ್ಲಿ ಮದುವೆಯಾದ ಗೌರಿ ಮತ್ತು ಅಮೀರ್, ಚಿತ್ರರಂಗದ ಕಲಾವಿದರು, ರಾಜಕೀಯ ಗಣ್ಯರಿಂದ ಶುಭಾಶಯಗಳನ್ನು ಸ್ವೀಕರಿಸಿದರು. ಈ ಮಧ್ಯೆ, ಸಾಮಾಜಿಕ ಜಾಲತಾಣಗಳಲ್ಲಿ ನಟನ ಅಭಿಮಾನಿಗಳು, ನವ ಜೋಡಿಗೆ ಶುಭ ಹರಿಸಿದರೆ, ಅತ್ತ ಮೂರು ಮದುವೆಯಾದ ಅಮೀರ್ ಬಗ್ಗೆ ಅನೇಕರು ತಮ್ಮ ತಮ್ಮ ದೃಷ್ಟಿಕೋನಗಳಲ್ಲಿ ಅಭಿಪ್ರಾಯ, ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. 1986ರಲ್ಲಿ ರೀನಾ ದತ್ತಾರನ್ನು ವಿವಾಹವಾದ ಅಮೀರ್ ಜೋಡಿಗೆ ನಟ ಜುನೈದ್ ಖಾನ್ ಮತ್ತು ಇರಾ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ.