

ಬೆಂಗಳೂರು: ಶ್ರೀನಿ ನಿರ್ದೇಶಿಸಿ ನಾಯಕನಾಗಿ ನಟಿಸಿರುವ ‘ಓಲ್ಡ್ಮಾಂಕ್’ ಚಿತ್ರಕ್ಕೆ ರಾಜ್ಯಾದ್ಯಂತ ಒಳ್ಳೇ ಪ್ರತಿಕ್ರಿಯೆ ಸಿಕ್ಕಿದೆ. ಹೀಗಿರುವಾಗಲೇ ಇದೀಗ ವಿದೇಶದಲ್ಲಿಯೂ ಸಿನಿಮಾ ರಿಲೀಸ್ ಮಾಡಲು ತಂಡ ಪ್ಲಾನ್ ಮಾಡಿದೆ. ಇದೇ ವಾರದಿಂದಲೇ ಕೆನಡಾ, ಯುಎಸ್ಎ ಮತ್ತು ಆಸ್ಟ್ರೇಲಿಯಾದಲ್ಲಿ ಚಿತ್ರ ಪ್ರದರ್ಶನ ಕಾಣಲಿದೆ.
ಇತ್ತೀಚೆಗಷ್ಟೇ ಚಿತ್ರದ ಸಕ್ಸಸ್ ಮೀಟ್ ಕಾರ್ಯಕ್ರಮದಲ್ಲಿ ಈ ವಿಚಾರವನ್ನು ಶ್ರೀನಿ ಬಹಿರಂಗಪಡಿಸಿದರು. ನಟಿ ಅದಿತಿ ಪ್ರಭುದೇವ, ಸಿಹಿಕಹಿ ಚಂದ್ರು, ಸುಜಯ್ ಶಾಸ್ತ್ರಿ ಭಾಗವಹಿಸಿದ್ದರು.