

ಬೆಂಗಳೂರು: ವಿಆರ್ಎಲ್ (VRL) ಸಮೂಹ ಸಂಸ್ಥೆಗಳ ಚೇರ್ಮನ್ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ (Vijay Sankeshwar) ಅವರ ಬಯೋಪಿಕ್ (biopic) ಆದ ‘ವಿಜಯಾನಂದ’ ಚಿತ್ರದ ಡ್ಯುಯೆಟ್ ಹಾಡು ಇತ್ತೀಚೆಗಷ್ಟೇ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದೆ. ಎರಡು ಕೋಟಿಗೂ ಹೆಚ್ಚು ವೀಕ್ಷಣೆಯಾಗಿರುವ ಈ ಹಾಡಿನ ನಂತರ ಇದೀಗ ಚಿತ್ರದ ಟ್ರೇಲರ್ ಬಿಡುಗಡೆಗೆ ಸಜ್ಜಾಗಿದೆ.
‘ವಿಜಯಾನಂದ’ (Vijayanand movie) ಚಿತ್ರದ ಟ್ರೇಲರ್ ಬಿಡುಗಡೆಗೆ ಇನ್ನು ಕೇವಲ 1 ದಿನವಷ್ಟೇ ಇದ್ದು, ನ. 19ರಂದು ಸಂಜೆ ಒರಾಯನ್ ಮಾಲ್ನ ಪಿವಿಆರ್ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ. ಯೂಟ್ಯೂಬ್ನ ಆನಂದ್ ಆಡಿಯೋ (Anand audio) ಚಾನಲ್ನಲ್ಲಿ ಈ ಟ್ರೇಲರ್ ಐದು ಭಾಷೆಗಳಲ್ಲಿ ಸಿಗಲಿದೆ.
‘ವಿಜಯಾನಂದ’ ಚಿತ್ರವು 1976ರಲ್ಲಿ ಒಂದು ಟ್ರಕ್ನಿಂದ ಪ್ರಾರಂಭವಾಗಿ ಇಂದು ಭಾರತದ ಅತಿ ದೊಡ್ಡ ಲಾಜಿಸ್ಟಿಕ್ಸ್ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಆರ್ಎಲ್ ಸಂಸ್ಥೆಯ ಮಾಲೀಕರಾಗಿರುವ ವಿಜಯ ಸಂಕೇಶ್ವರ ಅವರ ಅದ್ಭುತ ಮತ್ತು ರೋಮಾಂಚನಕಾರಿ ಕಥೆಯಾಗಿದೆ. ಈ ಕಥೆಯು ವಿಜಯ ಸಂಕೇಶ್ವರ ಮತ್ತು ಅವರ ಮಗ ಡಾ. ಆನಂದ ಸಂಕೇಶ್ವರ ಅವರ ಯಶಸ್ಸಿನ ಪ್ರಯಾಣವನ್ನು ಒಳಗೊಂಡಿದೆ.
‘ವಿಜಯಾನಂದ’ ಚಿತ್ರವು ಕನ್ನಡ ಚಿತ್ರರಂಗದ ಅಫಿಷಿಯಲ್ ಮತ್ತು ಕಮರ್ಷಿಯಲ್ ಜೀವನಚರಿತ್ರೆಯಾಗಿದ್ದು, ಡಿ.9ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ವಿಆರ್ಎಲ್ ಪ್ರೊಡಕ್ಷನ್ಸ್ನಡಿ ಡಾ. ಆನಂದ ಸಂಕೇಶ್ವರ (Anand Sankeshwar) ನಿರ್ಮಿಸುತ್ತಿರುವ ‘ವಿಜಯಾನಂದ’ ಚಿತ್ರದಲ್ಲಿ ನಿಹಾಲ್ ರಜಪೂತ್ (Nihal R), ಡಾ. ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ನಟಿಸಿದ್ದಾರೆ. ಅನಂತ್ ನಾಗ್, ರವಿಚಂದ್ರನ್, ವಿನಯಾ ಪ್ರಸಾದ್, ಸಿರಿ ಪ್ರಹ್ಲಾದ್, ಪ್ರಕಾಶ್ ಬೆಳವಾಡಿ, ಭರತ್ ಬೋಪಣ್ಣ ಮುಂತಾದವರು ನಟಿಸಿದ್ದಾರೆ. ರಿಷಿಕಾ ಶರ್ಮ (Rishika sharma) ಚಿತ್ರಕಥೆ ರಚಿಸುವುದರ ಜತೆಗೆ ನಿರ್ದೇಶನ ಮಾಡಿದ್ದಾರೆ.
ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.