ಪುನೀತ್ ಕುಟುಂಬಕ್ಕೆ ಶರಣರ ಸಾಂತ್ವನ, ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನ..

pic 06
Published on

ಚಿತ್ರದುರ್ಗ: ಮುರುಘಾ ಮಠದ ಪೀಠಾಧ್ಯಕ್ಷ ಡಾ. ಶ್ರೀ ಶಿವಮೂರ್ತಿ ಶರಣರು ಬುಧವಾರ ಬೆಂಗಳೂರಲ್ಲಿ ಪುನೀತ್ ರಾಜಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಬಸವ ಜಯಂತ್ಯುತ್ಸವ ವೇಳೆ ಪುನೀತ್ ಅವರಿಗೆ ಮರಣೋತ್ತರವಾಗಿ ಮಠದಿಂದ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರಕಟಿಸಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ್, ಶಿವರಾಜಕುಮಾರ್ ಹಾಗೂ ಕುಟುಂಬ ವರ್ಗದವರನ್ನು ಶರಣರು ಆಹ್ವಾನಿಸಿದರು. ಶ್ರೀಗಳ ಆಹ್ವಾನಕ್ಕೆ ಸಹಮತ ವ್ಯಕ್ತಪಡಿಸಿದ ಶಿವರಾಜಕುಮಾರ್ ಹಾಗೂ ಕುಟುಂಬದ ಸದಸ್ಯರು, ಚಿತ್ರದುರ್ಗದಲ್ಲಿ 2022ರ ಮೇ ತಿಂಗಳಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.

ಚಿತ್ರನಿರ್ವಪಕ ಚಿನ್ನೇಗೌಡ, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ, ಚಿತ್ರದುರ್ಗ ವೀರಶೈವ ಅರ್ಬನ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಟೇಲ್ ಶಿವಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ವಕೀಲ ಉಮೇಶ್, ಡಿ.ಎಸ್.ಮಲ್ಲಿಕಾರ್ಜುನ್, ಸಿದ್ದವ್ವನಹಳ್ಳಿ ಪರಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net