ಮೇ 11ರಿಂದ ಧಾರಾವಾಹಿ ಶೂಟಿಂಗ್‌ ಪ್ರಾರಂಭ

Serial Final
Published on

ಅಂತೂ ಕಿರುತೆರೆಯ ಮನವಿಗೆ ಸರ್ಕಾರ ಪುರಸ್ಕಾರ ಕೊಟ್ಟಿದೆ. ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಸರ್ಕಾರವು ಅನುಮತಿ ಕೊಟ್ಟಿದ್ದು, ಮೇ 11ರ ಸೋಮವಾರದಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಲಾಕ್‌ಡೌನ್‌ನಿಂದ ಕಿರುತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದು ಒಂದೂವರೆ ತಿಂಗಳಾಗಿವೆ. ಈ ಮಧ್ಯೆ ಲಾಕ್‌ಡೌನ್ ಕೊಂಚ ಸಡಲಿಕೆಯಾಗಿರುವುದರಿಂದ ಮತ್ತು ಬೇರೆ ಬೇರೆ ವಲಯಗಳಲ್ಲಿ ಕೆಲಸ ಪ್ರಾರಂಭವಾಗುತ್ತಿರುವುದರಿಂದ, ಕಿರುತೆರೆಯ ಚಿತ್ರೀಕರಣಕ್ಕೂ ಅನುವು ಮಾಡಿಕೊಡಬೇಕೆಂದು ಹಲವರು ಇದೀಗ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಕುರಿತು ಮಂಗಳವಾರ ಮಾತನಾಡಿದ್ದ ಕಂದಾಯ ಸಚಿವ ಆರ್​. ಅಶೋಕ್​, ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣ ಮಾಡುವುದರ ಕುರಿತಾಗಿ ಬುಧವಾರ ಮುಖ್ಯಮಂತ್ರಿಗಳ ಜತೆಗೆ ಚರ್ಚೆ ಮಾಡಿ, ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಅದರಂತೆ, ಸೋಮವಾರದಿಂದ ಚಿತ್ರೀಕರಣ ಮಾಡಬಹುದು ಎಂಬ ಅನುಮತಿ ಇಂದು ಸಿಕ್ಕಿದೆ. ಚಿತ್ರೀಕರಣ ಮಾಡುವ ಮನವಿಗೆ ಸರ್ಕಾರದಿಂದ ಗ್ರೀನ್​ ಸಿಗ್ನಲ್​ ಸಿಕ್ಕಿದ್ದಿಕ್ಕೆ ಕರ್ನಾಟಕ ಟೆಲಿವಿಷನ್​ ಅಸೋಸಿಯೇಷನ್​ ಅಧ್ಯಕ್ಷ ಶಿವಕುಮಾರ್​ ಸಂತಸ ವ್ಯಕ್ತಪಡಿಸಿದ್ದು, ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಧಾರಾವಾಹಿಗಳ ಚಿತ್ರೀಕರಣ ಮಾಡುವುದಕ್ಕೆ ಅನುಮತಿ ನೀಡಲಾಗಿದೆಯಾದರೂ, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. ಪ್ರಮುಖವಾಗಿ ಒಳಾಂಗಣದಲ್ಲಷ್ಟೇ ಚಿತ್ರೀಕರಣ ಮಾಡುವುದಕ್ಕೆ ಅನುಮತಿಯನ್ನು ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net