Plastic Bag Red Carpet : ನಮ್ಮನ್ನು ಆಳುವ ಸರ್ಕಾರಗಳು ಪ್ಲಾಸ್ಟಿಕ್ ಬಳಸದಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿವೆ. ಅಲ್ಲದೆ, ಸೆಲೆಬ್ರಿಟಿಗಳ ಮೂಲಕ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಪ್ರಚಾರ ಮಾಡುತ್ತಿವೆ. ಅದೇ ರೀತಿ, ಮಾಲ್‌ಗಳು ಮತ್ತು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್‌ಗಳನ್ನು ಮಾರಾಟ ಮಾಡದಂತೆ ಬ್ಯಾನ್ ಮಾಡಲಾಗಿದೆ. ಒಂದು ವೇಳೆ ಮಾರಿದರೆ, ಭಾರಿ ದಂಡ ಕೂಡ ವಿಧಿಸಲಾಗುತ್ತದೆ. ಹೀಗಿರುವಾಗ ಇಲ್ಲೊಬ್ಬ ನಟಿ ರಾಜಾರೋಷವಾಗಿ ಪ್ಲಾಸ್ಟಿಕ್ ಕವರ್ ಹಿಡಿದು, ರೆಡ್ ಕಾರ್ಪೆಟ್ ಮೇಲೆ ಪೋಸ್ ನೀಡಿರುವುದು ಎಲ್ಲರ ಗಮನ ಸೆಳೆದಿದೆ.