ದಾವಣಗೆರೆಯಲ್ಲಿ ಪೊಗರು ಹಾಡುಗಳ ಹಬ್ಬ

Pogaru
Published on

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಸಿನಿಮಾ ಇನ್ನೇನು ಬಿಡುಗಡೆಗೆ ಹತ್ತಿರ ಬಂದಿದೆ. ಫೆ. 19ಕ್ಕೆ ಕನ್ನಡದ ಜತೆಗೆ ತೆಲುಗು ಮತ್ತು ತಮಿಳಿನಲ್ಲಿ ರಿಲೀಸ್ ಆಗಲಿದೆ. ಹೀಗಿರುವಾಗಲೇ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲು ತಂಡ ಸಿದ್ಧತೆ ಮಾಡಿಕೊಂಡಿದೆ.

ಅದರಂತೆ, ಫೆ. 14ರ ಭಾನುವಾರ ಬೆಣ್ಣೆದೋಸೆ ನಗರಿ ದಾವಣಗೆರೆಯಲ್ಲಿ ಅದ್ದೂರಿ ಆಡಿಯೋ ಬಿಡುಗಡೆ ಸಮಾರಂಭ ನಡೆಯಲಿದೆ. ಆಡಿಯೋ ಬಿಡುಗಡೆ ಬಗ್ಗೆ ಸ್ವತಃ ಧ್ರುವ ಹೇಳಿಕೊಂಡಿದ್ದು, ಆವತ್ತು ಚಿತ್ರದ ಬಗ್ಗೆ ಒಂದಷ್ಟು ವಿಶೇಷತೆಗಳನ್ನೂ ನೀಡಲಿದ್ದಾರಂತೆ. ನಂದಕಿಶೋರ್ ನಿರ್ದೇಶನದ ‘ಪೊಗರು’ ಸಿನಿಮಾಕ್ಕೆ ಬಿ.ಕೆ ಗಂಗಾಧರ್ ಬಂಡವಾಳ ಹೂಡಿದ್ದು, ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net