ಈ ಸಿನಿಮಾದಲ್ಲೇ ಬಿಗ್ ಬಿ, ಡಾರ್ಲಿಂಗ್ ಪ್ರಭಾಸ್ ಒಟ್ಟಿಗೆ ಕಾಣಿಸಿಕೊಳ್ಳುವುದು. ಈ ಚಿತ್ರದಲ್ಲಿ ಬಾಲಿವುಡ್ನ ಹಾಟ್ ನಟಿ ದೀಪಿಕಾ ಪಡುಕೋಣೆ ನಾಯಕಿಯಾಗಿದ್ದಾರೆ. ಇದೀಗ, ಸಿನಿಮಾದಲ್ಲಿ ಪ್ರಭಾಸ್ ಹಾಗೂ ಅಮಿತಾಭ್ ಪಾತ್ರಗಳು ಜತೆಯಾಗಿ ನಟಿಸುವ ಭಾಗಗಳ ಶೂಟಿಂಗ್ ನಡೆಯುತ್ತಿದೆ. ಹಾಗಾಗಿ, ಶುಕ್ರವಾರ ದಂದು ನಟ ಪ್ರಭಾಸ್ ಹಾಗೂ ಅಮಿತಾಭ್ ಅವರು ಮೊದಲ ಬಾರಿಗೆ ಶೂಟಿಂಗ್ ಸೆಟ್ನಲ್ಲಿ ಭೇಟಿಯಾಗಿದ್ದಾರೆ. ಈ ಮೊದಲ ಬಾರಿಯ ಭೇಟಿಯ ಅನುಭವವನ್ನು ಇವರಿಬ್ಬರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದು, ಆ ಪೋಸ್ಟ್ಗಳು ವೈರಲ್ ಆಗುತ್ತಿವೆ. ನಟ ಅಮಿತಾಭ್ ಬಚ್ಚನ್ ಅವರು ಪ್ರಭಾಸ್ ಜತೆಗಿನ ಮೊದಲ ದಿನದ ಶೂಟಿಂಗ್ ಅನುಭವವನ್ನು ಹಂಚಿಕೊಂಡಿದ್ದು, ಪ್ರಭಾಸ್ ಅವರನ್ನು ಹಾಡಿ ಹೊಗಳಿದ್ದಾರೆ.