

ಬೆಂಗಳೂರು: ಕಳೆದ ವರ್ಷ ಬಿಡುಗಡೆಯಾದ 'ಶಾರ್ದೂಲ' ನಂತರ ಚೇತನ್ ಚಂದ್ರ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಿರಲಿಲ್ಲ. ಈಗ ಅವರು 'ಪ್ರಭುತ್ವ' ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಯೂಟ್ಯಬ್ನ ಜಂಕಾರ್ ಮ್ಯೂಸಿಕ್ ಚಾನಲ್ನಲ್ಲಿ ಬಿಡುಗಡೆಯಾಗಿದೆ.
ಚೇತನ್ಗೆ ನಾಯಕನಾಗಿ ಇದು 12ನೇ ಚಿತ್ರವಂತೆ. ಈ ಕುರಿತು ಮಾತನಾಡುವ ಅವರು, 'ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಒಳ್ಳೆಯ ಕಥೆ ಈ ಚಿತ್ರದಲ್ಲಿದೆ. ರಂಗನಾಥ್ ಅಷ್ಟೇ ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ದೊಡ್ಡ ಕಲಾವಿದರ ಬಳಗವೇ ಇದ್ದು, ಎಲ್ಲರೂ ಚೆನ್ನಾಗಿ ನಟಿಸಿದ್ದಾರೆ' ಎನ್ನುತ್ತಾರೆ ಚೇತನ್ ಚಂದ್ರ. ಅವರಿಗೆ ನಾಯಕಿಯಾಗಿ ಪಾವನಾ ಗೌಡ ಅಭಿನಯಿಸಿದ್ದಾರೆ.
'ಪ್ರಭುತ್ವ' ಚಿತ್ರದಲ್ಲಿ ನಾಸರ್, ಶರತ್ ಲೋಹಿತಾಶ್ವ, ಆದಿ ಲೋಕೇಶ್, ಅರವಿಂದ್ ರಾವ್, ಹರೀಶ್ ರಾಯ್, ವಿಜಯ್ ಚೆಂಡೂರ್, ವೀಣಾ ಸುಂದರ್, ರಾಜೇಶ್ ನಟರಂಗ, ಅನಿತಾ ಭಟ್ ಮುಂತಾದವರು ನಟಿಸಿದ್ದು, ಚಿತ್ರಕ್ಕೆ ಎಮಿಲ್ ಸಂಗೀತ ಮತ್ತು ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣವಿದೆ.