ಎನ್​ಟಿಆರ್ ನೀಲ್ ಸಿನಿಮಾ ಅಧಿಕೃತ, ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ

Neel
Published on

ಜೂ. ಎನ್​ಟಿಆರ್​ಗೆ ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ... ಕಳೆದ ಕೆಲ ತಿಂಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹೀಗೊಂದು ಸುದ್ದಿ ಓಡಾಡುತ್ತಲೇ ಇತ್ತು. ಆದರೆ ಅಧಿಕೃತ ಘೋಷಣೆ ಮಾತ್ರ ಆಗಿರಲಿಲ್ಲ. ಅದಾದ ಬಳಿಕ ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್​ನಲ್ಲಿ ನೀಲ್ ನಿರ್ದೇಶನದ ಸಿನಿಮಾವೊಂದು ಬರಲಿದೆ ಎಂಬ ಸುದ್ದಿಯಾಗಿತ್ತು.

ಇದೀಗ ಜೂ. ಎನ್​ಟಿಆರ್ ಬರ್ತ್​ಡೇ ನಿಮಿತ್ತ ಈ ವಿಚಾರ ಅಧಿಕೃತವಾಗಿ ಬಹಿರಂಗವಾಗಿದೆ. ಸದ್ಯ ರಾಜಮೌಳಿಯ ‘ಆರ್​ಆರ್​ಆರ್’ ಚಿತ್ರದಲ್ಲಿ ಎನ್​ಟಿಆರ್ ನಟಿಸುತ್ತಿದ್ದು, ಅದು ಮುಗಿಯುತ್ತಿದ್ದಂತೆ ಕೊರಟಾಲ ಶಿವ ನಿರ್ದೇಶನದ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಾದ ಬಳಿಕ ನೀಲ್ ಜತೆ ಎನ್​ಟಿಆರ್ ಕೈ ಜೋಡಿಸಲಿದ್ದಾರೆ. ಆ ಚಿತ್ರಕ್ಕೆ ಮೈ ತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಲಿದೆ. ಮಾಸ್ ಆಕ್ಷನ್ ಶೈಲಿಯ ಸಿನಿಮಾ ಇದಾಗಿರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net