ಅವರ ನೆನಪು ಸದಾ ಹಸಿರಾಗಿರುತ್ತದೆ ... ಇರ್ಫಾನ್ ಸಾವಿಗೆ ಕಂಬನಿ ಮಿಡಿದ ಪ್ರಧಾನಿ ಮೋದಿ

Irfan - Modi Final
Published on

ಬುಧವಾರ ಬೆಳಿಗ್ಗೆ ನಿಧನರಾದ ಬಾಲಿವುಡ್‌ನ ಖ್ಯಾತ ನಟ ಇರ್ಫಾನ್ ಖಾನ್ ಸಾವಿಗೆ ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಇರ್ಫಾನ್ ಅವರ ಸಾವು ಚಿತ್ರರಂಗ ಮತ್ತು ರಂಗಭೂಮಿಗೆ ತುಂಬಲಾರದ ನಷ್ಟ. ಅವರು ತಮ್ಮ ಅದ್ಭುತ ಅಭಿನಯದಿಂದ ಜನರ ಮನಸ್ಸಿನಲ್ಲಿ ಸದಾ ಹಸಿರಾಗಿರುತ್ತಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಮೋದಿ ಹೇಳಿದ್ದಾರೆ.

ಬರೀ ಮೋದಿ ಅವರಷ್ಟೇ ಅಲ್ಲ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರು, ಇರ್ಫಾನ್ ಖಾನ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ನ್ಯೂರೋ ಎಂಡೋಕ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಇರ್ಫಾನ್, ಇಂದು ಬೆಳಿಗ್ಗೆ ಮುಂಬೈನ ಕೋಕಿಲಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆ ಇಂದು ಸಂಜೆ ವರ್ಸೋವಾ ಚಿತಾಗಾರದಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net