'ಪ್ರಿಯಾಂಕಾ' ಉಗ್ರಾವತಾರ

Priyanka Gandhi
Published on

ಬೆಂಗಳೂರು: ಲಾಕ್​ಡೌನ್ ಸಮಯದಲ್ಲಿ ಜಿಮ್ಲ್ಲಿ ಬೆವರಿಳಿಸಿ, ದೇಹವನ್ನು ಫಿಟ್ ಮಾಡಿಕೊಂಡಿದ್ದ ನಟಿ ಪ್ರಿಯಾಂಕಾ ಉಪೇಂದ್ರ, ಈಗ ‘ಉಗ್ರಾವತಾರ’ ತಾಳಿದ್ದಾರೆ. ಅಂದರೆ, ಇದುವರೆಗೂ ಸಾಫ್ಟ್ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಂಡಿದ್ದ ಅವರು, ‘ಉಗ್ರಾವತಾರ’ ಚಿತ್ರದಲ್ಲಿ ಮೊದಲ ಬಾರಿಗೆ ಖಡಕ್ ಪೊಲೀಸ್ ಅಧಿಕಾರಿಯಾಗಿ ವೈರಿಗಳನ್ನು ಎದುರಿಸುತ್ತಿದ್ದಾರೆ. ಅಚ್ಚರಿಯ ವಿಚಾರ ಏನೆಂದರೆ, ಎಲ್ಲಿಯೂ ಡ್ಯೂಪ್ ಬಳಸದೆ ತಾವೇ ಸಾಹಸ ದೃಶ್ಯಗಳಲ್ಲಿ ಭಾಗವಹಿಸಿದ್ದಾರೆ. ಗುರುಮೂರ್ತಿ ನಿರ್ದೇಶನದಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣ ಇತ್ತೀಚೆಗಷ್ಟೇ

ಎಚ್​ಎಂಟಿ ಫ್ಯಾಕ್ಟರಿಯಲ್ಲಿ ನಡೆಯಿತು. ಈ ಚಿತ್ರದಲ್ಲಿ ಬಹುಭಾಷಾ ನಟರಾದ ಸುಮನ್, ಜಾಕಿ ಶ್ರಾಫ್, ಆಶಿಷ್ ವಿದ್ಯಾರ್ಥಿ ನಟಿಸುತ್ತಿದ್ದಾರೆ. ರವಿ ಬಸ್ರೂರು ಸೋದರ ರಾಧಾಕೃಷ್ಣ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಮುನಿಕೃಷ್ಣ ಈ ಚಿತ್ರವನ್ನು ನಿರ್ವಿುಸುತ್ತಿದ್ದು, ನವೆಂಬರ್​ನಲ್ಲಿ ಪ್ರಿಯಾಂಕಾ ಅವರ ಜನ್ಮದಿನದ ಪ್ರಯುಕ್ತ ಚಿತ್ರದ ಟೀಸರ್ ಅಥವಾ ಟ್ರೇಲರ್ ಬಿಡುಗಡೆ ಆಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net