ಎಲ್ಲರದ್ದು ಮುಖವಾಡದ ಬದುಕು! ವೇಶ್ಯಾವಾಟಿಕೆ ಪ್ರಯೋಜನದ ಬಗ್ಗೆ ನಟಿ ಓವಿಯಾ ಓಪನ್​ ಟಾಕ್​

Oviya
Published on

ಚೆನ್ನೈ: ರಾಕಿಂಗ್​ ಸ್ಟಾರ್ ಯಶ್ ಜತೆಗೆ ಕಿರಾತಕ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ಓವಿಯಾ, ಅದಾದ ಬಳಿಕ ಮಿಸ್ಟರ್ ಮೊಮ್ಮಗ ಸಿನಿಮಾ ಮಾಡಿದ್ದರು. ಕನ್ನಡದಲ್ಲಿ ನಟಿಸಿದ್ದು ಕೇವಲ ಎರಡೇ ಸಿನಿಮಾ ಆದರೂ ಸೂಪರ್​ ಹಿಟ್​ ಕಿರಾತಕ ಸಿನಿಮಾದಿಂದಾಗಿ ಕನ್ನಡಿಗರ ಮನಸ್ಸಿನಲ್ಲಿ ನೆಲೆಸಿದ್ದಾರೆ. ತಮಿಳಿನಲ್ಲಿಯೇ ಹೆಚ್ಚು ಬಿಜಿಯಾಗಿದ್ದ ಒವಿಯಾ ಇದೀಗ ಅಲ್ಲೂ ಕೂಡ ಅವಕಾಶಗಳು ಇಲ್ಲದೆ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದಾರೆ.

ಸಿನಿಮಾಗಳ ಅವಕಾಶ ಕಡಿಮೆಯಾದ ಬಳಿಕ ಒವಿಯಾ, ತಮಿಳಿನ ವಿಜಯ್ ಚಾನೆಲ್​ನಲ್ಲಿ ಪ್ರಸಾರವಾದ ಬಿಗ್​ಬಾಸ್​ ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ತಮ್ಮ ವಿಭಿನ್ನ ಮ್ಯಾನರಿಸಂ​ ಮೂಲಕ ಜನಮನ್ನಣೆ ಗಳಿಸಿದರು. ಶೋ ಮುಗಿಸಿದ ಬಳಿಕವೂ ಓವಿಯಾ ಅವರಿಗೆ ಕೆಲ ಸಿನಿಮಾಗಳಲ್ಲಿ ಮತ್ತೆ ಅವಕಾಶಗಳು ಸಿಕ್ಕವು. ಆದರೆ, ಮತ್ತೆ ಅವಕಾಶಗಳು ಕಡಿಮೆಯಾದವು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಯಾವುದೇ ವಿಚಾರದಲ್ಲೂ ಬೋಲ್ಡ್​ ಆಗಿ ಮಾತನಾಡುವ ಮೂಲಕ ಆಗಾಗ ಸುದ್ದಿಯಾಗುತ್ತಿರುತ್ತಾರೆ.

ಇದೀಗ ಸಂದರ್ಶನವೊಂದರಲ್ಲಿ ಓವಿಯಾ ಲೈಂಗಿಕ ಶಿಕ್ಷಣದ ಬಗ್ಗೆ ಬೋಲ್ಡ್​ ಆಗಿ ಮಾತನಾಡಿದ್ದಾರೆ. ಲೈಂಗಿಕ ಶಿಕ್ಷಣವನ್ನು ಕಡ್ಡಾಯ ಮಾಡಬೇಕು. ಎಲ್ಲರೂ ಇಂದು ಮುಖವಾಡವನ್ನು ಧರಿಸಿ ಬದುಕುತ್ತಿದ್ದಾರೆ. ಪ್ರತಿಯೊಬ್ಬರಿಗೂ ಅನೇಕ ಆಸೆಗಳಿರುತ್ತವೆ. ಹಾಗೆಯೇ ಹಾರ್ಮೋನುಗಳು ಸಹ ಇವೆ. ಅನೇಕ ಜನರು ಸಂಸ್ಕೃತಿಯ ಹಿಂದೆ ಅಡಗಿದ್ದಾರೆ. ಅದು ಸತ್ಯವೂ ಹೌದು ಎಂದಿದ್ದಾರೆ.

ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು. ಹಾಗೆ ಮಾಡಿದರೆ ಅತ್ಯಾಚಾರಗಳಿಗೆ ಕಡಿವಾಣ ಬೀಳುತ್ತದೆ ಎಂದು ಓವಿಯಾ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಅಂದಹಾಗೆ ಮಲಯಾಳಂ ನಟಿ ಓವಿಯಾ ಅವರು 2010ರಲ್ಲಿ ಕಲಾವಾಣಿ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಆ ನಂತರ ಮದಯನೈ ಕೂಟಂ, ಕಾಲಕಲಾಪು, ಮರೀನಾ, ಮುದರ್ ಕೂಡಂ, ಯಾಮಿರುಕಾ ಪಯಮೆಂ, 90 ಎಂಎಲ್ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಇದೀಗ ಸಿನಿಮಾಗಳ ಅವಕಾಶಗಳಿಗಾಗಿ ಎದುರು ನೋಡುತ್ತಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net