ಚಿರು ಅಂತ್ಯಕ್ರಿಯೆ: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

Chiranjeevi - Final
Published on

ಭಾನುವಾರ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್​ವುಡ್​ ನಟ ಚಿರಂಜೀವಿ ಸರ್ಜಾ ಅವರ ಅಂತಿಮ ಸಂಸ್ಕಾರ ಕನಕಪುರ ರಸ್ತೆಯಲ್ಲಿರುವ ನೆಲಗುಳಿಯ ಧ್ರುವ ಸರ್ಜಾ ಅವರ ಬೃಂದಾವನ ಫಾರ್ಮ್​ ಹೌಸ್​ನಲ್ಲಿ ನಡೆಯಲಿದೆ. ಅಲ್ಲಿ ಭರದಿಂದ ಕೆಲಸಗಳು ನಡೆಯುತ್ತಿದ್ದು, ಇಂದು ಮಧ್ಯಾಹ್ನ ಚಿರು ಅವರ ಪಾರ್ತೀವ ಶರೀರವನ್ನು ಅಲ್ಲಿಗೆ ಕೊಂಡಯ್ಯಲಾಗುತ್ತದೆ.

ಚಿರಂಜೀವಿ ಅವರ ಅಂತ್ಯಕ್ರಿಯೆಗೆ ಸಾರ್ವಜನಕರಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ. ಕುಟುಂಬವರ್ಗದವರು, ಮಾಧ್ಯಮಗಳು, ಗಣ್ಯರನ್ನು ಹೊರತುಪಡಿಸಿ ಮಿಕ್ಕಂತೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ. ಇನ್ನು ಈ ಪ್ರದೇಶವು ರಾಮನಾಗರ ಜಿಲ್ಲೆ ವ್ಯಾಪ್ತಿಗೆ ಬರಲಿದ್ದು, ರಾಮನಗರದ ಪೊಲೀಸರು ಸೂಕ್ತ ಬ್ಯಾರಿಕೇಡ್​ಗಳನ್ನು ಹಾಕಿ ಬಂದೋಬಸ್ತ್​ ಮಾಡಿದ್ದಾರೆ.

ಈಗಾಗಲೇ, ಅಂತ್ಯಸಂಸ್ಕಾರದಲ್ಲಿ ಭಾಗವಹಿಸುವ ಕುಟುಂಬಸ್ಥರು ಹಾಗೂ ಗಣ್ಯರಿಗಾಗಿ ಪೆಂಡಲ್ ವ್ಯವಸ್ಥೆ ಮಾಡಲಾಗ್ತಿದೆ. ಮಿಕ್ಕಂತೆ ಫಾರ್ಮ್ ಹೌಸ್ನ ಒಳ ಭಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ಎಂಟು ಜನ ಕೆಲಸಗಾರರು ಗುಂಡಿ ತೆಗೆಯುವ ಕೆಲಸದಲ್ಲಿ ತೊಡಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net