ಸಿನಿಮಾ ಥಿಯೇಟರ್​ ಹೌಸ್​ಫುಲ್​ಗೆ ಬ್ರೇಕ್​; ಸಿಎಂ ಭೇಟಿ ಮಾಡಿ, ಆದೇಶ ಹಿಂಪಡೆಯಲು ಮನವಿ ಮಾಡಿದ ಪುನೀತ್​

punith
Published on

ಬೆಂಗಳೂರು: ಕರ್ನಾಟಕದಾದ್ಯಂತ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಸಿನಿಮಾ ಥಿಯೇಟರ್​ಗಳಲ್ಲಿ ಹೌಸ್​ಫುಲ್​ ಪ್ರದರ್ಶನಕ್ಕೆ ಬ್ರೇಕ್​ ಹಾಕಿ ಆದೇಶ ಹೊರಡಿಸಿದೆ. ಈ ಕುರಿತಾಗಿ ನಟ ಪುನೀತ್​ ರಾಜ್​ಕುಮಾರ್​ ಅವರು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಸರ್ಕಾರದ ಆದೇಶವನ್ನು ಪುನೀತ್​ ನಿನ್ನೆಯೇ ವಿರೋಧಿಸಿದ್ದರು. ಈಗ ತಾನೆ ಯುವರತ್ನ ಸಿನಿಮಾ ತೆರೆ ಕಂಡಿದ್ದು, ಸರ್ಕಾರದ ನಿರ್ಧಾರದಿಂದ ಸಿನಿಮಾ ರಂಗದವರಿಗೆ ಸಾಕಷ್ಟು ಹೊಡೆತ ಬೀಳಲಿದೆ ಎಂದು ಅವರು ಹೇಳಿದ್ದರು. ಈಗಾಗಲೇ ಬುಕ್ಕಿಂಗ್ ಮಾಡಿದವರಿಗೂ ಸಮಸ್ಯೆಯಾಗುತ್ತದೆ ಎಂದು ಅವರು ತಿಳಿಸಿದ್ದರು. ಇಂದು ಅದೇ ವಿಚಾರವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಸಿನಿಮಾ ಥಿಯೇಟರ್​ಗಳಲ್ಲಿ ಶೇ. ನೂರು ಜನರಿಗೆ ಅವಕಾಶ ಮುಂದುವರಿಸುವಂತೆ ಮನವಿ ಮಾಡಿದ್ದಾರೆ.

ನಟ ಪುನೀತ್‌ ಅವರೊಂದಿಗೆ ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಶ್ ಆನಂದ್ ರಾಮ್ ಕೂಡ ಸಿಎಂ ಭೇಟಿ ಮಾಡಿದ್ದು, ಅವರಲ್ಲಿ ಮನವಿ ಮಾಡಿ ಬಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net