

ಬೆಂಗಳೂರು: ನಟ ಪುನೀತ್ ರಾಜಕುಮಾರ್ ಮತ್ತು ನಿರ್ದೇಶಕ ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ನಲ್ಲಿ ಮೂರನೇ ಸಿನಿಮಾ ಶುರುವಾಗಲಿದೆ ಎಂಬ ಸುದ್ದಿ ಈ ಹಿಂದೆಯೇ ಹರಿದಾಡಿತ್ತು. ಆದರೆ, ಅಧಿಕೃತವಾಗಿ ಘೋಷಣೆ ಆಗಿರಲಿಲ್ಲ. ಇದೀಗ ಆ ವಿಚಾರ ಮುನ್ನೆಲೆಗೆ ಬಂದಿದ್ದು, ನಿರ್ದೇಶಕ ಸಂತೋಷ್ ಆನಂದರಾಮ್ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಮುದ್ರೆಯೊತ್ತಿದ್ದಾರೆ.
‘ರಾಜ್ಕುಮಾರ’, ‘ಯುವರತ್ನ’ ಬಳಿಕ ಈ ಜೋಡಿ ಹ್ಯಾಟ್ರಿಕ್ ಹೊಡೆಯಲು ಸಿದ್ಧತೆ ನಡೆಸಿದೆ. ಈ ಚಿತ್ರಕ್ಕೂ ಹೊಂಬಾಳೆ ಫಿಲಂಸ್ನ ವಿಜಯ ಕಿರಗಂದೂರು ಬಂಡವಾಳ ಹೂಡಲಿದ್ದಾರೆ. 2022ರಲ್ಲಿ ಈ ಸಿನಿಮಾ ಸೆಟ್ಟೇರಲಿದೆ.