ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗುರುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯ ಸ್ವಾಮಿ ದರ್ಶನ ಪಡೆದರು. ಚೇತನ್ಕುಮಾರ್ ನಿರ್ದೇಶನದ ಜೇಮ್ಸ್ ಚಿತ್ರದ ಚಿತ್ರೀಕರಣದ ಬಿಡುವಿನ ವೇಳೆ 600 ಮೆಟ್ಟಿಲುಗಳಿರುವ ಬೆಟ್ಟವನ್ನು ಏರಿ ಆಂಜನೇಯನಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ ಪುನೀತ್. ನೆಚ್ಚಿನ ನಟನನ್ನು ನೋಡುತ್ತಿದ್ದಂತೆ ಸಾಕಷ್ಟು ಅಭಿಮಾನಿಗಳು ಅವರನ್ನು ಸುತ್ತುವರಿದು, ಫೋಟೋಗೂ ಮುಗಿ ಬಿದ್ದರು. ಪೊಲೀಸರು ಅಭಿಮಾನಿಗಳನ್ನು ಚದುರಿಸಿ ಪುನೀತ್ಗೆ ಹನುಮನ ದರ್ಶನಕ್ಕೆ ಅನುವು ಮಾಡಿಕೊಟ್ಟರು.