18 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್​ ಬೈ ಹೇಳಿದ ನಟ ಧನುಷ್​: ರಜಿನಿ ಪುತ್ರಿ ಐಶ್ವರ್ಯಾ ಜತೆ ಡಿವೋರ್ಸ್​

1220648
Published on

ಚೆನ್ನೈ: ಕಾಲಿವುಡ್​ ಸೂಪರ್​ಸ್ಟಾರ್​ ಧನುಷ್​ ಅವರು 18 ವರ್ಷದ ವೈವಾಹಿಕ ಜೀವನಕ್ಕೆ ದಿಢೀರ್​ ಗುಡ್​ ಬೈ ಹೇಳುವ ಮೂಲಕ ಅಭಿಮಾನಿಗಳಿಗೆ ಶಾಕ್​ ನೀಡಿದ್ದಾರೆ. ಸೂಪರ್​ಸ್ಟಾರ್​ ರಜಿನಿಕಾಂತ್ ಅವರ ಹಿರಿಯ​ ಪುತ್ರಿ ಐಶ್ವರ್ಯಾರನ್ನು ವರಿಸಿದ್ದ ಧನುಷ್​, ಇದೀಗ ಟ್ವಿಟರ್​ ಮೂಲಕ ವಿಚ್ಛೇದನಾ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಂತೆ ಮತ್ತು ಪರಸ್ಪರ ಹಿತೈಷಿಗಳಾಗಿ ಈ 18 ವರ್ಷಗಳು ಒಟ್ಟಿಗೆ ಕಳೆದೆವು. ಈ ಸುದೀರ್ಘ ಪ್ರಯಾಣವು ಬೆಳವಣಿಗೆ, ತಿಳುವಳಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿತ್ತು. ಆದರೆ, ಇಂದು ನಾವು ನಮ್ಮ ದಾರಿಯಲ್ಲಿ ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ ಎಂದು ಧನುಷ್​ ಟ್ವೀಟ್​ ಮಾಡಿದ್ದಾರೆ.

ಇಷ್ಟೇ ಅಲ್ಲದೆ, ಜನರಲ್ಲಿ ಧನುಷ್​ ಮನವಿಯೊಂದನ್ನು ಮಾಡಿದ್ದಾರೆ. ನಮ್ಮ ನಿರ್ಧಾರವನ್ನು ಗೌರವಿಸಿ, ನಮಗೆ ಬೇಕಾಗಿರುವ ಖಾಸಗಿತನವನ್ನು ನೀಡಿ ಎಂದಿದ್ದಾರೆ. ಐಶ್ವರ್ಯಾ ಕೂಡ ಹೇಳಿಕೆಯನ್ನು ನೀಡಿದ್ದು, ಹೆಚ್ಚಿಗೆ ಹೇಳುವ ಅಗತ್ಯವಿಲ್ಲ. ನಿಮ್ಮ ತಿಳುವಳಿಕೆ ಮತ್ತು ಪ್ರೀತಿ ಮಾತ್ರ ಅಗತ್ಯ ಎಂದು ಜನರಲ್ಲಿ ಕೋರಿದ್ದಾರೆ.

ಐಶ್ವರ್ಯಾ ಮತ್ತು ಧನುಷ್​ 2004ರ ನವೆಂಬರ್​ 18ರಂದು ಮದುವೆಯಾದರು. ದಂಪತಿಗಳಿಗೆ ಯಾತ್ರ ಮತ್ತು ಲಿಂಗ ಹೆಸರಿನ ಇಬ್ಬರು ಗಂಡು ಮಕ್ಕಳಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net