

ಹೈದರಾಬಾದ್: ವರದನಾಯಕ, ಡಕೋಟಾ ಪಿಕ್ಚರ್ ಮತ್ತು ಲವ್ ಯು ಆಲಿಯಾ ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರಿಗೂ ಪರಿಚಿತವಾಗಿರುವ ನಟಿ ನಿಕೇಶಾ ಪಟೇಲ್, ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ.
ಸದ್ಯ ಸಿನಿಮಾ ಅವಕಾಶಗಳು ಕಡಿಮೆಯಾಗಿದ್ದರು ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುವ ನಿಕೇಶಾ, ಆಗಾಗ ಹಾಟ್ ಫೋಟೋಗಳನ್ನು ಹರಿಬಿಡುವ ಮೂಲಕ ಪಡ್ಡೆ ಹುಡುಗರು ಹೃದಯಕ್ಕೆ ಕನ್ನ ಹಾಕುತ್ತಿರುತ್ತಾರೆ. ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಂನಲ್ಲಿ ನಿಕೇಶಾ ಬಿಕಿನಿ ಫೋಟೋವನ್ನು ಹರಿಬಿಡುವ ಮೂಲಕ ಪಡ್ಡೆ ಹುಡುಗರ ಮೈ ಬಿಸಿಯೇರಿಸಿದ್ದಾರೆ.
ನೀಲಿ ಬಣ್ಣದ ಬಿಕಿನಿಯಲ್ಲಿ ಕ್ಯಾಮೆರಾಗೆ ಪೊಸ್ ನೀಡಿರುವ ಫೋಟೋವನ್ನು ಶೇರ್ ಮಾಡಿದ್ದು, ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್ಗಳು ಹರಿದುಬಂದಿವೆ. ನಿಕೇಶ್ ಹಾಟ್ ಲುಕ್ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ.
ಸದ್ಯ ನಿಕೇಶಾ ಕೈಯಲ್ಲಿ ಯಾವುದೇ ಸಿನಿಮಾಗಳಿಲ್ಲ. ಯಾರಾದರೂ ಅವಕಾಶ ನೀಡಿದರೆ, ಸಿನಿ ರಂಗದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಲು ನಿಕೇಶಾ ರೆಡಿಯಾಗಿದ್ದಾರೆ. (ಏಜೆನ್ಸೀಸ್)