

ಮಂಡ್ಯ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ.
ನೆಚ್ಚಿನ ನಟ ಅಗಲಿದಕ್ಕೆ ಅಭಿಮಾನಿಗಳು ನೋವು ವ್ಯಕ್ತಪಡಿಸುತ್ತಿದ್ದಾರೆ. ಅಭಿಮಾನಿಗಳು ರಸ್ತೆಗೆ ಇಳಿಯುತ್ತಿದ್ದಂತೆ ಅಭಿಮಾನಿಯೊಬ್ಬನನ್ನು ಸರ್ಕಲ್ ಇನ್ಸ್ಪೆಕ್ಟರ್ ಜೀಪಿನ ಬಳಿಗೆ ಎಳೆತಂದರು.
ಕುತ್ತಿಗೆ ಪಟ್ಟಿ ಹಿಡಿದು ಎಳೆದು ತಂದು ಜೀಪಿಗೆ ಹತ್ತಿಸಿದ ಸಿಪಿಐ ಸಂತೋಷ್ ಕುಮಾರ್ ವಿರುದ್ಧ ಅಪ್ಪು ಫ್ಯಾನ್ಸ್ ತಿರುಗಿಬಿದ್ದಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಭಯದಲ್ಲಿ ಅಭಿಮಾನಿಯನ್ನು ಸಂತೋಷ್ ಕುಮಾರ್ ಜೀಪಿನಿಂದ ಇಳಿಸಿದ್ದಾರೆ.
ಪರಿಸ್ಥಿತಿ ಗಂಭೀರವಾಗುವ ಹಿನ್ನೆಲೆಯಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಕಳುಹಿಸುವಂತೆ ಮೇಲಧಿಕಾರಿಗಳಿಗೆ ಸಿಪಿಐ ಮನವಿ ಮಾಡಿದ್ದಾರೆ. ಇದಿಷ್ಟು ಘಟನೆ ಮಂಡ್ಯದ ಸಂಜಯ ವೃತ್ತದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಮನೆಯಲ್ಲಿ ಜಿಮ್ ಮಾಡುವಾಗ ಹೃದಯಾಘಾತ ಆಯಿತು. ತಕ್ಷಣ ಅವರನ್ನು ರಮಣಶ್ರೀ ಆಸ್ಪತ್ರೆಗೆ ದಾಖಲಿಸಲಾಯಿತು. ಪರಿಸ್ಥಿತಿ ಗಂಭೀರವಾದ ಬಳಿಕ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಸಂಖ್ಯಾತ ಅಭಿಮಾನಿಗಳ ಕೋರಿಕೆ ಕೊನೆಗೂ ಫಲಿಸಲಿಲ್ಲ. ಆಸ್ಪತ್ರೆಯಲ್ಲಿ ಪುನೀತ್ ಕೊನೆಯುಸಿರೆಳೆದಿದ್ದಾರೆ. (ದಿಗ್ವಿಜಯ ನ್ಯೂಸ್)