ಪುನೀತ್ ಪಾರ್ಥೀವ ಶರೀರ ಮೆರವಣಿಗೆ: ನಗರದಲ್ಲಿ ಸಂಚಾರ ಮಾರ್ಗದ ಬದಲಾವಣೆ ಹೀಗಿದೆ...

Puneeth
Published on

ಬೆಂಗಳೂರು: ಪುನೀತ್ ರಾಜ್​ಕುಮಾರ್ ಅವರ ಪುತ್ರಿ ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಸ್ತುತ ಪುನೀತ್ ರಾಜ್​ಕುಮಾರ್ ಅವರ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ ಮೂರ ಗಂಟೆಗೆ ಪುನೀತ್​ ಅವರ ಪಾರ್ಥೀವ ಶರೀರವನ್ನು ಕಂಠೀರವ ಸ್ಟುಡಿಯೋಗೆ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತದೆ. ಮೆರವಣಿಗಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ.

ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರ ಕಾರ್ಯಕ್ಕೆ ಸಂಬಂಧಿಸಿದಂತೆ ಸಂಚಾರ ಮಾರ್ಗದಲ್ಲಿ ಈ ರೀತಿ ಬದಲಾವಣೆ ಮಾಡಿಕೊಳ್ಳಲಾಗಿದೆ.

1. ಮೈಸೂರು ರಸ್ತೆಯಿಂದ ತುಮಕೂರು ರಸ್ತೆ ಕಡೆಗೆ ಹೋಗುವ ವಾಹನಗಳನ್ನು ನೈಸ್ ರಸ್ತೆ, ನಾಯಂಡಹಳ್ಳಿ, ನಾಗರಬಾವಿ ಮತ್ತು ಸುಮನಹಳ್ಳಿ ಜಂಕ್ಷನ್​ನಲ್ಲಿ ಬದಲಾಯಿಸಲಾಗಿದೆ.

2. ತುಮಕೂರು ರಸ್ತೆಯಿಂದ ಬೆಂಗಳೂರು ನಗರಕ್ಕೆ ಮೇಲುಸೇತುವೆ ಮೇಲೆ ಹೋಗುವ ವಾಹನಗಳು ಮತ್ತು ತುಮಕೂರು ರಸ್ತೆಯಿಂದ ಮೈಸೂರು ರಸ್ತೆ ಕಡೆಗೆ ಸಿಎಂಟಿಐ ಜಂಕ್ಷನ್​ನಲ್ಲಿ ಮಾರ್ಗ ಬದಲಾಯಿಸಲಾಗಿದೆ.

3. ಜಾಲಹಳ್ಳಿ ಕ್ರಾಸ್ ಕಡೆಯಿಂದ ರಾಜಕುಮಾರ್ ಸಮಾಧಿ ಕಡೆಗೆ ಹೋಗುವ ವಾಹನಗಳು ಟಿವಿಎಸ್​ ಕ್ರಾಸ್​ ಮತ್ತು ಸೋನಾಲ್ ಗಾರ್ಮೆಂಟ್ಸ್ ಬಳಿ ಬದಲಾಯಿಸಲಾಗಿದೆ.

4. ಮಹಾಲಕ್ಷ್ಮಿ ಬಡಾವಣೆ ಕಡೆಯಿಂದ ರಾಜಕುಮಾರ್ ಸಮಾಧಿ ಕಡೆಗೆ ಹೋಗುವ ವಾಹನಗಳು ಕೃಷ್ಣಾನಂದ ನಗರ ಜಂಕ್ಷನ್ ಬಳಿ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net