ರಾಘಣ್ಣ 'ರಾಜತಂತ್ರ' ಬಿಡುಗಡೆಗೆ ಸಿದ್ಧ; ಸೆನ್ಸಾರ್​ನಿಂದಲೂ ಸಿಕ್ತು ಪ್ರಮಾಣ ಪತ್ರ

Rajaatantra
Published on

ಬೆಂಗಳೂರು: ವಿಶ್ವಂ ಡಿಜಿಟಲ್ ಮೀಡಿಯಾ ಪ್ರೈ. ಲಿ. ಲಾಂಛನದಲ್ಲಿ ಜೆ.ಎಂ. ಪ್ರಹ್ಲಾದ್, ವಿಜಯ್ ಭಾಸ್ಕರ್ ಹರಪನಹಳ್ಳಿ ಹಾಗೂ ಪಿ.ಆರ್. ಶ್ರೀಧರ್ ನಿರ್ಮಿಸಿರುವ ರಾಜತಂತ್ರ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ರಾಘವೇಂದ್ರ ರಾಜಕುಮಾರ್ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪತ್ರ ನೀಡಿದೆ.

ಜೆ.ಎಂ. ಪ್ರಹ್ಲಾದ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಸಾಹಿತ್ಯ ಬರೆದಿರುವ ಈ ಚಿತ್ರದ ನಿರ್ದೇಶಕರು ಪಿ.ವಿ.ಆರ್ ಸ್ವಾಮಿ ಗೂಗರದೊಡ್ಡಿ. ಸುರೇಶ್ ಸಂಗೀತ ನಿರ್ದೇಶನ, ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ನಾಗೇಶ್ ಸಂಕಲನ, ಚಂದನ್ ಕಲಾ ನಿರ್ದೇಶನ ಹಾಗೂ ವೈಲೆಂಟ್ ವೇಲು, ರಾಮ್ ದೇವ್, ಅಲ್ಟಿಮೆಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ರಾಘವೇಂದ್ರ ರಾಜಕುಮಾರ್, ದೊಡ್ಡಣ್ಣ, ಶ್ರೀನಿವಾಸ ಮೂರ್ತಿ, ಭವ್ಯ, ಶಂಕರ್ ಅಶ್ವಥ್, ನೀನಾಸಂ ಅಶ್ವಥ್, ಮುನಿರಾಜು, ವಿಜಯಭಾಸ್ಕರ್, ಪ್ರತಾಪ್ ಸಿಂಹ ಅಗರ, ಶಿವಾನಂದ, ಪ್ರಕಾಶ್ ಕಾರಿಯಪ್ಪ, ವೆಂಕಟೇಶ್ ಪ್ರಸಾದ್, ಹೋಳಿ‌ ವೆಂಕಟೇಶ್, ಸ್ವಾತಿ ಅಂಬರೀಶ್, ವಲ್ಲಭ್, ಪ್ರವೀಣ್, ಉಮೇಶ್, ಕುಮಾರ್, ಕನ್ನಡ ಪ್ರೇಮ್, ಲಕ್ಷ್ಮಣ್, ಭೀಮ, ಆನಂದ್ ಪನ್ನೇದೊಡ್ಡಿ, ಹೇರಂಭ, ಸತೀಶ್ ಗೌಡ, ಮೀರಾ ಶ್ರೀ ಗೌಡ ಮುಂತಾದವರು ರಾಜತಂತ್ರ ದ ತಾರಾಬಳಗದಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net