ರಮ್ಯಾ ನಿರ್ಮಾಣದ 'ಸ್ವಾತಿಮುತ್ತಿನ ಮಳೆ ಹನಿಯೇ' ಚಿತ್ರಕ್ಕೆ ಸಂಕಷ್ಟ!

Swathi Muttina Male Haniye - Ramya
Published on

ಬೆಂಗಳೂರು: ರಮ್ಯಾ ನಿರ್ಮಾಣದ 'ಸ್ವಾತಿಮುತ್ತಿನ ಮಳೆ ಹನಿಯೇ' ಚಿತ್ರದ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್​ ಹಂತದಲ್ಲಿದೆ. ಹೀಗಿರುವಾಗದಲೇ ಚಿತ್ರಕ್ಕೊಂದು ಸಂಕಷ್ಟ ಎದುರಾಗಿದೆ. 'ಸ್ವಾತಿ ಮುತ್ತಿನ ಮಳೆ ಹನಿಯೇ' ಎಂಬ ಶೀರ್ಷಿಕೆಯನ್ನು ನೀಡಬಾರದು ಎಂದು ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ನೊಟೀಸ್ ನೀಡಿದ್ದಾರೆ.

ಹೌದು, 'ಸ್ವಾತಿಮುತ್ತಿನ ಮಳೆ ಹನಿಯೇ' ಶೀರ್ಷಿಕೆ ಬಳಸಿಕೊಳ್ಳುವುದಕ್ಕೆ ರಮ್ಯಾಗೆ ಇದೀಗ ಸಮಸ್ಯೆ ಎದುರಾಗಿದೆ. ಈ ಕುರಿತು ತಮ್ಮ ವಕೀಲರ ಮೂಲಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಬಾಬು ಅವರು ತಮ್ಮ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಮೂಲಕ ನೊಟೀಸ್ ನೋಟೀಸ್​ ನೀಡಿದ್ದಾರೆ. ಶೀರ್ಷಿಕೆ ನೀಡಿದರೆ ಕೃತಿ ಚೌರ್ಯವಾಗುತ್ತೆ ಎಂದು ಉಲ್ಲೇಖಿಸಿದ್ದಾರೆ.

'ಸ್ವಾತಿಮುತ್ತಿನ ಮಳೆ ಹನಿಯೇ' ಎಂಬ ಶೀರ್ಷಿಕೆಯು ರಾಜೇಂದ್ರ ಸಿಂಗ್​ ಬಾಬು ನಿರ್ದೇಶನದ 'ಬಣ್ಣದ ಗೆಜ್ಜೆ' ಚಿತ್ರದ 'ಸ್ವಾತಿಮುತ್ತಿನ ಮಳೆ ಹನಿಯೇ' ಎಂಬ ಹಾಡಿನಿಂದ ಸ್ಫೂರ್ತಿಪಡೆದಿದೆ. ಅದೇ ಕಾರಣಕ್ಕೆ, ಆ ಶೀರ್ಷಿಕೆಯನ್ನು ಇಡುವುದಕ್ಕೆ ರಾಜೇಂದ್ರ ಸಿಂಗ್​ ಬಾಬು ವಿರೋಧ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮೊದಲು ರಮ್ಯಾ, ರಾಜ್​ ಬಿ. ಶೆಟ್ಟಿ ನಿರ್ದೇಶನದ 'ಸ್ವಾತಿಮುತ್ತಿನ ಮಳೆ ಹನಿಯೇ' ಚಿತ್ರದಲ್ಲಿ ನಾಯಕಿಯಾಗಿ ನಟಿಸಬೇಕಿತ್ತು. ಈ ಕುರಿತು ಘೋಷಣೆಯೂ ಆಗಿತ್ತು ಆದರೆ, ಹೊಸಬರ ಚಿತ್ರಗಳನ್ನು ನಿರ್ಮಿಸುವುದಕ್ಕೆ ಹುಟ್ಟುಹಾಕಿರುವ ಸಂಸ್ಥೆಯಾದ್ದರಿಂದ, ಆ ಚಿತ್ರದಲ್ಲಿ ಹೊಸಬರು ಇರುತ್ತಾರೆ, ತಾನು ಇನ್ನೊಂದು ಚಿತ್ರದ ಮೂಲಕ ಬರುವುದಾಗಿ ರಮ್ಯಾ ಹೇಳಿಕೊಂಡಿದ್ದರು. ಆ ನಂತರ ಅವರ ಜಾಗಕ್ಕೆ ಸಿರಿ ರವಿಕುಮಾರ್​ ಬಂದಿದ್ದರು

ಇದಾದ ನಂತರ ಅವರು 'ಉತ್ತರಕಾಂಡ' ಎಂಬ ಚಿತ್ರದ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ರೀಎಂಟ್ರಿ ಕೊಟ್ಟಿದ್ದರು. ಇನ್ನೇನು ತಮ್ಮ ನಿರ್ಮಾಣದ ಚಿತ್ರವನ್ನು ಮುಗಿಸಿ, ಬಿಡುಗಡೆ ಮಾಡುವಷ್ಟರಲ್ಲಿ ಇಂಥದ್ದೊಂದು ಸಂಕಷ್ಟ ಎದುರಾಗಿದೆ. ಈ ಪ್ರಕರಣವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹೇಗೆ ಬಗೆಹರಿಸುತ್ತದೆ ಎಂಬ ಕುತೂಹಲ ಎಲ್ಲರಿಗೂ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net