ದುಬೈನಿಂದ ಅಕ್ರಮವಾಗಿ ಚಿನ್ನ ತಂದ ಮಾಣಿಕ್ಯ, ಪಟಾಕಿ ಚಿತ್ರ ಖ್ಯಾತಿಯ ನಟಿ ರನ್ಯಾ ರಾವ್ ಅಧಿಕಾರಿಗಳ ವಶಕ್ಕೆ! Ranya Rao

Ranya Rao
Published on

Ranya Rao : ದುಬೈನಿಂದ ಹೆಚ್ಚುವರಿ ಪ್ರಮಾಣದ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಾಣಿಕ್ಯ ಸಿನಿಮಾ ಖ್ಯಾತಿಯ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ನಿನ್ನೆ (ಮಾ.04) ವಶಕ್ಕೆ ಪಡೆದಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆದಿರುವ ಡಿ.ಆರ್.ಐ ತಂಡ, ವಿಚಾರಣೆಗೆ ಒಳಪಡಿಸಿದೆ. ಕಳೆದ ರಾತ್ರಿ ಈ ಘಟನೆ ನಡೆದಿದೆ.

ರನ್ಯಾ ರಾವ್ ಅವರು ಡಿಜಿಪಿ ರಾಮಚಂದ್ರ ರಾವ್ ಸಂಬಂಧಿ.  ಖಚಿತ ಮಾಹಿತಿಯ ಮೇರೆಗೆ ಡಿ ಆರ್ ಐ ತಂಡ ವಿಮಾನ ನಿಲ್ದಾಣಕ್ಕೆ ಬಂದಿತ್ತು. ನಟಿ ರನ್ಯಾ ಏರ್ಪೋರ್ಟಿಗೆ ಬರುತ್ತಿದ್ದಂತೆ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಂದಹಾಗೆ ರನ್ಯಾ ರಾವ್ ಅವರು ನಟ ಸುದೀಪ್ ಅಭಿನಯದ ಮಾಣಿಕ್ಯ ಹಾಗೂ ಗಣೇಶ್ ನಟನೆಯ ಪಟಾಕಿ ಸಿನಿಮಾದಲ್ಲಿ ನಟಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net