ಲವ್ ಲೈಫ್ ಬಗ್ಗೆ ಕೊನೆಗೂ ಬಾಯ್ಬಿಟ್ಟ ರಶ್ಮಿಕಾ ಮಂದಣ್ಣ |Rashmika Mandanna Relationship Status

rush final
Published on

ಕಿರಿಕ್​ ಪಾರ್ಟಿ ಸಾನ್ವಿ, ರಶ್ಮಿಕಾ ಮಂದಣ್ಣ ‘ಪುಷ್ಪ 2’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಚೆನ್ನೈನಲ್ಲಿ ನಡೆದ ‘ಪುಷ್ಪ 2’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಲವ್ ಲೈಫ್ ಬಗ್ಗೆ ನಟಿ ಪರೋಕ್ಷವಾಗಿ ಹಿಂಟ್​​ ಕೊಟ್ಟಿದ್ದಾರೆ.

ಭಾವಿ ಪತಿ ಬಗ್ಗೆ ಕೇಳಿದ್ದಕ್ಕೆ ರಶ್ಮಿಕಾ ನಾಚಿ ನೀರಾಗಿದ್ದಾರೆ. ಚಿನ್ನೈನಲ್ಲಿ ನಡೆದ ಸಿನಿಮಾ ಪ್ರಚಾರದ ಕಾರ್ಯಕ್ರಮದಲ್ಲಿ ರಶ್ಮಿಕಾ ಜೊತೆ ಅಲ್ಲು ಅರ್ಜುನ್ ಮತ್ತು ಶ್ರೀಲೀಲಾ ಕೂಡ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಇದೇ ಸಂದರ್ಭ ಮದುವೆಗೆ ಸಂಬಂಧಿಸಿದ ಪ್ರಶ್ನೆಯನ್ನು ರಶ್ಮಿಕಾಗೆ ಕೇಳಲಾಯಿತು. ರಶ್ಮಿಕಾ ಸ್ವಲ್ಪ ಹೊತ್ತು ಯೋಚಿಸಿ ನಂತರ ನಗುತ್ತಲೇ ಅವರು ನಿಮಗೆಲ್ಲ ಅವರು ಗೊತ್ತು ಎಂದು ಸುಳಿವು ಕೊಟ್ಟಿದ್ದಾರೆ.

ನೀವು ಚಿತ್ರರಂಗದ ಯಾರನ್ನಾದರೂ ಮದುವೆಯಾಗುತ್ತೀರಾ? ಅಥವಾ ಹೊರಗಿನವರಾ? ಎಂದು ಮತ್ತೆ ಕೇಳಿದಾಗ, ಅದು ಎಲ್ಲರಿಗೂ ತಿಳಿದಿರುವ ವಿಷಯ ಎಂದು ರಶ್ಮಿಕಾ ನಸು ನಕ್ಕರು. ನಮಗೆ ಗೊತ್ತಿಲ್ಲ. ಒಂದು ಸಣ್ಣ ಸುಳಿವು ಕೊಡಿ ಎಂದು ಮತ್ತೆ ಪ್ರಶ್ನಿಸಿದಾಗ ಹಾಗೆ ಹೇಳುವುದು ಬೇಡ. ನಾನೇ ಖುದ್ದಾಗಿ ಒಂದು ದಿನ ಎಲ್ಲವನ್ನೂ ಹೇಳುತ್ತೇನೆ ಎಂದು ನಗುತ್ತಲೇ ರಶ್ಮಿಕಾ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net