ಬೋಲ್ಡ್ ಆದರು ರಶ್ಮಿಕಾ ; ರಣಬೀರ್​ ಜತೆ ಬ್ಯಾಕ್​ ಟು ಬ್ಯಾಕ್​ ಲಿಪ್​ಲಾಕ್​!

still
Published on

ತೆಲುಗಿನ ‘ಅರ್ಜುನ್ ರೆಡ್ಡಿ’ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಆ್ಯಕ್ಷನ್-ಕಟ್ ಹೇಳುತ್ತಿರುವ ಬಾಲಿವುಡ್ ನಟ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ ನಟಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಅನಿಮಲ್’. ಇತ್ತೀಚೆಗಷ್ಟೆ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಅದರ ಬೆನ್ನಲ್ಲೇ ಚಿತ್ರತಂಡ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ.

‘ಹುವಾ ಮೇ..’ ಎಂದು ಸಾಗುವ ಈ ರೊಮ್ಯಾಂಟಿಕ್ ಹಾಡಿನಲ್ಲಿ ರಣಬೀರ್ ಜತೆ ರಶ್ಮಿಕಾ ಲಿಪ್‌ಲಾಕ್ ಮಾಡಿದ್ದು, ಸದ್ಯ ವೈರಲ್ ಆಗಿದೆ. ಈ ಹಿಂದೆ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ವಿಜಯ್ ದೇವರಕೊಂಡ ಜತೆ ರಶ್ಮಿಕಾ ಚುಂಬನದ ಬೋಲ್ಡ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ನಾಲ್ಕು ವರ್ಷಗಳ ಬಳಿಕ ಬಾಲಿವುಡ್‌ನಲ್ಲಿ ಮತ್ತಷ್ಟು ಬೋಲ್ಡ್ ಆಗಿದ್ದಾರೆ. ಪ್ರೀತಂ ಸಂಗೀತದಲ್ಲಿ ಮೂಡಿಬಂದಿರುವ ಈ ಹಾಡಿಗೆ ಕನ್ನಡದಲ್ಲಿ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ಚಿತ್ರದ ಸಂಭಾಷಣೆಯ ಜವಾಬ್ದಾರಿಯನ್ನೂ ಅವರೇ ಹೊತ್ತಿದ್ದಾರೆ.

ರಣಬೀರ್, ರಶ್ಮಿಕಾ ಜತೆ ಅನಿಲ್ ಕಪೂರ್, ತೃಪ್ತಿ ದಿಮ್ರಿ, ಫಹೀಂ ಫಾಸಿಲ್, ಶಕ್ತಿ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಅನಿಮಲ್’ ಡಿ. 1ರಂದು ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
-ಏಜೆನ್ಸೀಸ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net