

ಬೆಂಗಳೂರು: ನಟ ರಿಯಲ್ ಸ್ಟಾರ್ ಉಪೇಂದ್ರ ನೆಲಮಂಗಲದ ಹರ್ಷ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಪೇಂದ್ರ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಲಭ್ಯವಾಗಿರುವ ಮಾಹಿತಿಯ ಪ್ರಕಾರ ತಿಳಿದು ಬಂದಿದೆ.
ಉಪೇಂದ್ರ ಸಿನಿಮಾ ಶೂಟಿಂಗ್ನಲ್ಲಿ ತೊಡಗಿದ್ದಾಗ ಡಸ್ಟ್ ಅಲರ್ಜಿಗೆ ಒಳಗಾಗಿದ್ದರು. ಇದರಿಂದಾಗಿ ಉಸಿರಾಟದಲ್ಲಿ ತೊಂದರೆಯಾಗಿದೆ. ಹೀಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ, ಬಳಿಕ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ ಉಪೇಂದ್ರ ಕಬ್ಜ ಹಾಗೂ ಬುದ್ಧಿವಂತ 2 ಸಿನಿಮಾವನ್ನು ಪೂರ್ಣಗೊಳಿಸಿದ್ದು, ಬಿಡುಗಡೆಗೂ ಮುನ್ನದ ತಯಾರಿಯಲ್ಲಿದೆ. ಇದಲ್ಲದೆ, ಉಪೇಂದ್ರ ಉಪ್ಪಿ 2 ಸಿನಿಮಾದ ನಂತರ ಮತ್ತೆ ನಿರ್ದೇಶನಕ್ಕಿಳಿದಿದ್ದು, ಯು-I ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.