ರೇಣುಕಾಸ್ವಾಮಿ ಸಾವು ಪ್ರಕರಣ: ಆರು ತಿಂಗಳ ಬಳಿಕ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ | Pavithra Gowda

Pavithra Gowda
Published on

Pavithra Gowda : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಜೈಲು ಸೇರಿದ್ದ ನಟ ದರ್ಶನ್​ ಗೆಳತಿ ಪವಿತ್ರಾ ಗೌಡ ಇಂದು (ಡಿ.17) ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

ಹೈಕೋರ್ಟ್​ನಿಂದ ಷರತ್ತುಬದ್ಧ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಬಿಡುಗಡೆಯಾಗಿದ್ದಾರೆ. ಕಳೆದ ಜೂನ್​ 20ರಂದು ಜೈಲು ಪಾಲಾಗಿದ್ದರು. ಸುಮಾರು 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೇ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಒಂದೂವರೆ ತಿಂಗಳ ಹಿಂದೆಯೇ ಅನಾರೋಗ್ಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿರುವುದರಿಂದ ದರ್ಶನ್​ ಕೂಡ ರಿಲೀಫ್​ ಆಗಿದ್ದಾರೆ. ನಿನ್ನೆಯಷ್ಟೇ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ್ದಾರೆ.

ಜೈಲಿನಿಂದ ಬಿಡುಗಡೆಯಾದ ಪವಿತ್ರಾ ಗೌಡಳನ್ನು ಕರೆದುಕೊಂಡು ಹೋಗಲು ಅವರ ಕುಟುಂಬಸ್ಥರು ಜೈಲಿನ ಬಳಿ ಬಂದಿದ್ದಾರೆ. ಅಪ್ಪ, ಅಮ್ಮ ಹಾಗೂ ಸಹೋದರ ಆಗಮಿಸಿದ್ದಾರೆ. ಇದೇ ಸಂದರ್ಭದಲ್ಲಿ ಪವಿತ್ರಾ ಗೌಡ ಅವರ ತಾಯಿ ಪರಪ್ಪನ ಅಗ್ರಹಾರ ಜೈಲಿನ ಬಳಿ ಇರುವ ಮುನೇಶ್ವರ ದೇಗುಲಕ್ಕೆ ಪೂಜೆ ಸಲ್ಲಿಸಿದರು.​​ ಜೈಲಿಂದ ರಿಲೀಸ್ ಆಗಿ ಆರ್.ಆರ್ ನಗರದ ಮನೆಗೆ ಪವಿತ್ರಾಗೌಡ ತೆರಳಿದ್ದಾರೆ.

ಈ ಪ್ರಕರಣದ ಉಳಿದ ಆರೋಪಿಗಳಿಗೂ ಜಾಮೀನು ದೊರೆತಿದ್ದು, ಅವರು ಕೂಡ ಆರು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಸಿಕ್ಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net