ಡಿಂಗ್ರಿ ನಾಗರಾಜ್​ ಮೇಲೆ ನಟಿಯ ಗಂಭೀರ ಆರೋಪ

Dingri - Rani
Published on

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಡಿಂಗ್ರಿ ನಾಗರಾಜ್​ ಅವರು ನಟಿಯರಿಗೆ ಅಶ್ಲೀಲ ಮೆಸೇಜ್​ಗಳನ್ನು ಕಳುಹಿಸುತ್ತಾರೆ ಮತ್ತು ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ನಟಿ ಮತ್ತು ಸಂಘದ ಉಪಾಧ್ಯಕ್ಷರಾದ ರಾಣಿ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ರಾಣಿ, 'ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದಲ್ಲಿ ಅಧ್ಯಕ್ಷ ಡಿಂಗ್ರಿ ನಾಗರಾಜ್​ ಮತ್ತು ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್​ ಅವರು ಮಹಿಳಾ ಕಲಾವಿದರ ಜತೆಗೆ ಅಸಭ್ಯವಾಗಿ ವರ್ತಿಸುವುದರ ಜತೆಗೆ, ಅವಾಚ್ಯ ಶಬ್ದಗಳಿಂದ ಅವಮಾನಿಸುತ್ತಿದ್ದಾರೆ. ಜತೆಗೆ, ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಾರೆ. ಈ ವಿಚಾರವಾಗಿ ಗಲಾಟೆಯೂ ಆಗಿದೆ. ಸಂಘದ ಸಭೆಯಲ್ಲಿ ಚರ್ಚೆಯೂ ಆಗಿದೆ' ಎಂದು ಹೇಳಿದ್ದಾರೆ.

ಸಂಘದ ಹಣವನ್ನು ಡಿಂಗ್ರಿ ನಾಗರಾಜ್​ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಅವರು, 'ಸಂಘದಲ್ಲಿ ಶೀಘ್ರವೇ ಚುನಾವಣೆ ನಡೆಯಲಿದ್ದು, ಹೊಸ ಸದಸ್ಯರ ನೋಂದಣಿಯಲ್ಲಿ ಅಕ್ರಮ ಎಸಗಿದ್ದಾರೆ. ಅಕ್ರಮವಾಗಿ ಬೈಲಾ ತಿದ್ದುಪಡಿ ಮಾಡುವುದರ ಜತೆಗೆ, ಸಂಘ'ದ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಈ ವಿಷಯವಾಗಿ ಕೇಳಿದರೆ, ನನ್ನನ್ನು ಉಪಾಧ್ಯಕ್ಷೆ ಸ್ಥಾನದಿಂದ ಏಕಾಏಕಿ ಉಚ್ಚಾಟನೆ ಮಾಡಿದ್ದಾರೆ. ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇನೆ' ಎಂದು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಮತ್ತು ಹಲವು ಧಾರಾವಾಹಿಗಳಲ್ಲಿ ನಟಿಸಿರುವ ರಾಣಿ ಆರೋಪಿಸಿದ್ದಾರೆ.

ಸಂಘದ ಹಣವನ್ನು ಡಿಂಗ್ರಿ ನಾಗರಾಜ್​ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಅವರು, 'ಸಂಘದಲ್ಲಿ ಶೀಘ್ರವೇ ಚುನಾವಣೆ ನಡೆಯಲಿದ್ದು, ಹೊಸ ಸದಸ್ಯರ ನೊಂದಣಿಯಲ್ಲಿ ಅಕ್ರಮ ಎಸಗಿದ್ದಾರೆ. ಅಕ್ರಮ ಬೈಲಾ ತಿದ್ದುಪಡಿ ಹಾಗೂ ಸಂಘ'ದ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ' ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಒಟ್ಟಾರೆ, ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದಲ್ಲಿ ದೊಡ್ಡ ಬಿರುಕು ಮೂಡಿದ್ದು, ತಮ್ಮ ಮೇಲೇರಿರುವ ಆರೋಪಗಳಿಗೆ ಡಿಂಗ್ರಿ ನಾಗರಾಜ್​ ಹೇಗೆ ಉತ್ತರಿಸುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net