ಸಂಗೀತ ಸ್ವರ ಲೋಕದ ಮಾಂತ್ರಿಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಅನಾರೋಗ್ಯದಿಂದ ಶುಕ್ರವಾರ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಬದುಕಿದ್ದಾಗ 16 ಭಾಷಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡುವ ಮೂಲಕ ಸಂಗೀತ ಲೋಕದಲ್ಲಿ ಸಂಚಲನ ಮೂಡಿಸಿದ್ದರು. ಗಾಯನದಲ್ಲಷ್ಟೇ ಅಲ್ಲ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯಲ್ಲೂ ಅದ್ವಿತೀಯ ಸಾಧನೆ ಮಾಡಿದ್ದರು. ಇವರ ಅಪ್ರತಿಮ ಸಾಧನೆಗೆ ಹಲವು ಪ್ರಶಸ್ತಿಗಳು ಸಂದಿವೆ. ಇಂತಹ ಅಪ್ರತಿಮ ಪ್ರತಿಭೆಯನ್ನು ಕಳೆದುಕೊಂಡ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಈ ಸಂದರ್ಭದಲ್ಲಿ ಎಸ್ಬಿಪಿ ಅವರ ಒಂದಷ್ಟು ಅಪರೂಪದ ಫೋಟೋಗಳು ಇಲ್ಲಿವೆ.