

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ದುರ್ಬಳಕೆ ವಿಚಾರವಾಗಿ ಹಾಸ್ಯನಟ ಹಾಗೂ ಸಂಗೀತ ನಿರ್ದೇಶಕ ಸಾಧುಕೋಕಿಲ ಅವರು ಬುಧವಾರ ದೂರು ಸಲ್ಲಿಸಿದ್ದಾರೆ.
ದಕ್ಷಿಣ ವಿಭಾಗದ ಸಿಇಎಸ್ ಠಾಣೆಗೆ ದೂರು ನೀಡಿರುವ ಸಾಧುಕೋಕಿಲ ಅವರು ಕೆಲ ಕಿಡಿಗೇಡಿಗಳು ಫೇಸ್ಬುಕ್, ಇನ್ಸ್ಟಾಗ್ರಾಂ ಸೇರಿದಂತೆ ಜಾಲತಾಣ ವೇದಿಕೆಯಲ್ಲಿ ಟ್ರೋಲ್ ಮಾಡಲು ಪೋಟೋ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ದೂರಿದ್ದಾರೆ.
ಅನವಶ್ಯಕ ವಿಚಾರಗಳಿಗೆ ಫೋಟೋ ಎಡಿಟ್ ಮಾಡಿ ಅಪ್‌ಲೋಡ್ ಮಾಡುತ್ತಿದ್ದಾರೆ. ನನ್ನ ಗೌರವಕ್ಕೆ ಧಕ್ಕೆಯಾಗಿದೆ. ಹೀಗಾಗಿ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಿಇಎಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. (ದಿಗ್ವಿಜಯ ನ್ಯೂಸ್)