ಸಲಾರ್ ಪೃಥ್ವಿರಾಜ್ ಲುಕ್ ರಿವೀಲ್

Salar
Published on

ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ನಾಯಕನಾಗಿರುವ ಚಿತ್ರ ‘ಸಲಾರ್’. ಈ ಚಿತ್ರ ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಬಿಡುಗಡೆಯಾಗಲಿದ್ದು, ಸದ್ಯ ಚಿತ್ರೀಕರಣ ಭರದಿಂದ ಸಾಗಿದೆ. ‘ಸಲಾರ್’ನಲ್ಲಿ ಪ್ರಭಾಸ್​ಗೆ ಶ್ರುತಿ ಹಾಸನ್ ನಾಯಕಿಯಾಗಿದ್ದು, ಹೊಂಬಾಳೆ ಫಿಲಂಸ್ ಬ್ಯಾನರ್​ನಲ್ಲಿ ವಿಜಯ್ ಕಿರಗಂದೂರು ನಿರ್ವಿುಸುತ್ತಿದ್ದಾರೆ.

ಚಿತ್ರದಲ್ಲಿ ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ ನಟಿಸುತ್ತಿದ್ದಾರೆ ಎಂಬ ಸುದ್ದಿಯಿತ್ತಾದರೂ, ಅವರ ಲುಕ್ ಎಲ್ಲೂ ರಿವೀಲ್ ಆಗಿರಲಿಲ್ಲ. ಭಾನುವಾರ ಅವರ 39ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಅವರ ಲುಕ್ ಬಿಡುಗಡೆ ಮಾಡಿದೆ. ಪೃಥ್ವಿರಾಜ್ ‘ವರದರಾಜ ಮನ್ನಾರ್’ ಎಂಬ ಖಡಕ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯ ಅವರ ಲುಕ್ ಕೂಡ ಸಾಕಷ್ಟು ವೈರಲ್ ಆಗಿದ್ದು, ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ.

ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರ್ ಜತೆಗೆ ಚಿತ್ರದಲ್ಲಿ ಜಗಪತಿ ಬಾಬು, ಈಶ್ವರಿ ರಾವ್, ಶ್ರಿಯಾ ರೆಡ್ಡಿ, ಮಧು ಗುರುಸ್ವಾಮಿ ಪ್ರಮುಖ ತಾರಾಗಣದಲ್ಲಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ, ಭುವನ್ ಗೌಡ ಛಾಯಾಗ್ರಹಣವಿದ್ದು, 2023ರ ಸೆಪ್ಟೆಂಬರ್ 23ರಂದು ‘ಸಲಾರ್’ ಬಿಡುಗಡೆಯಾಗಲಿದೆ. ‘ಸಲಾರ್’ ಹೊರತುಪಡಿಸಿ ಪೃಥ್ವಿರಾಜ್ ‘ಗೋಲ್ಡ್’, ‘ಕಾಪ’ ಹಾಗೂ ‘ಆಡುಜೀವಿತಂ’ ಚಿತ್ರಗಳಲ್ಲೂ ನಟಿಸುತ್ತಿದ್ದಾರೆ. -ಏಜೆನ್ಸೀಸ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net