ಎರಡನೇ ಹಂತದಲ್ಲಿ ಗೌರಿ ; ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬ ಆಚರಿಸಿದ ಚಿತ್ರತಂಡ

Gowri (1)
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು

ಸಾಹಿತಿ ಪಿ. ಲಂಕೇಶ್ ಅವರ ಮೊಮ್ಮಗ, ಇಂದ್ರಜಿತ್ ಲಂಕೇಶ್ ಮಗ ಸಮರ್ಜಿತ್ ಲಂಕೇಶ್ ‘ಗೌರಿ’ ಚಿತ್ರದ ಮೂಲಕ ನಾಯಕನಾಗಿ ಡೆಬ್ಯೂ ಮಾಡುತ್ತಿರುವುದು ಗೊತ್ತಿದೆ. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಸಿನಿಮಾ ಮೂಡಿಬರುತ್ತಿದ್ದು, ಇತ್ತೀಚೆಗಷ್ಟೆ ಶೂಟಿಂಗ್ ನಡುವೆಯೇ ಚಿತ್ರತಂಡ ಸಮರ್ಜಿತ್ ಹುಟ್ಟುಹಬ್ಬ ಆಚರಿಸಿದೆ. ಈ ಸಂದರ್ಭದಲ್ಲಿ ಅವರ ಅಜ್ಜಿ ಇಂದಿರಾ ಲಂಕೇಶ್, ತಾಯತ ಅರ್ಪಿತಾ, ಇಂದ್ರಜಿತ್ ಲಂಕೇಶ್, ನಾಯಕಿ ಸಾನ್ಯಾ ಅಯ್ಯರ್, ಮಾನಸಿ ಸುಧೀರ್, ಎಸ್ತರ್ ನರೋನ ಸೇರಿ ಇಡೀ ‘ಗೌರಿ’ ಚಿತ್ರತಂಡ ಉಪಸ್ಥಿತರಿದ್ದರು.

ಇಂದ್ರಜಿತ್ ಲಂಕೇಶ್, ‘ಈಗಾಗಲೇ ಚಿಕ್ಕಮಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿ, ಸದ್ಯ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ. ಸಮರ್ಜಿತ್ ನಾನಂದುಕೊಂಡಿದ್ದಕ್ಕಿಂತ ಚೆನ್ನಾಗಿ ಅಭಿನಯಿಸುತ್ತಿದ್ದಾನೆ’ ಎಂದು ಮಾಹಿತಿ ನೀಡಿದರು. ಮಂಗಳವಾರ (ಅ. 31) ಹುಟ್ಟುಹಬ್ಬ ಆಚರಿಸಿಕೊಂಡ ನಾಯಕ ಸಮರ್ಜಿತ್, ‘ನಾನು ಸರಳವಾಗಿ ಬರ್ತ್‌ಡೇ ಆಚರಿಸಿಕೊಳ್ಳಲು ಇಷ್ಟಪಡುತ್ತೇನೆ. ಇಂದು ಚಿತ್ರತಂಡದವರು ಹುಟ್ಟುಹಬ್ಬ ಆಚರಿಸಿದ್ದು ಖುಷಿಯಾಗಿದೆ. ಸಾಕಷ್ಟು ತಯಾರಿ ಮಾಡಿಕೊಂಡು ನಟಿಸುತ್ತಿದ್ದೇನೆ. ಸಿನಿಮಾ ಚೆನ್ನಾಗಿ ಮೂಡಿಬರುವ ಭರವಸೆಯಿದೆ’ ಎಂದು ಹೇಳಿಕೊಂಡರು.

‘ಗೌರಿ’ ಛಾಯಾಗ್ರಾಹಕ ಕೆಕೆ ಅವರ ನೂರನೇ ಚಿತ್ರವಾಗಿದ್ದ, ‘ಸಮರ್ಜಿತ್ ನಟನೆ ನೋಡಿದಾಗ ಅವರಿಗಿದು ಮೊದಲ ಚಿತ್ರ ಅಂತನ್ನಿಸುವುದಿಲ್ಲ. ಅಷ್ಟು ಚೆನ್ನಾಗಿ ನಟಿಸುತ್ತಿದ್ದಾರೆ’ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net