

ಬೆಂಗಳೂರು: ಕನ್ನಡ ಸಂಗೀತ ಲೋಕದಲ್ಲಿ ತನ್ನದೇ ಆದ ವಿಶಿಷ್ಟ ಗಾಯನ ಶೈಲಿ ಮೂಲಕ ಖ್ಯಾತಿ ಗಳಿಸಿರುವ ರ‍್ಯಾಪ್ ಗಾಯಕ ಎಂದರೆ ಅದು ಚಂದನ್ ಶೆಟ್ಟಿ ಆಗಿದ್ದಾರೆ. ಇತ್ತೀಚೆಗೆ ಇವರ ಕಂಠದಿಂದ ಹೊರಬಿದ್ದರಿರುವ 'ಮೈಮಾಟ' ಎಂಬ ಹಾಡು ಹಲವು ರೀತಿಯ ವಿವಾದ ಹಾಗೂ ವದಂತಿಗಳಿಗೆ ದಾರಿ ಮಾಡಿಕೊಟ್ಟಿದ್ದವು.
ಈ ವದಂತಿಗಳ ಹರಡುವಿಕೆ ಅಧಿಕವಾಗಿರುವುದನ್ನು ಗಮನಿಸಿರುವ ಚಂದನ್ ಶೆಟ್ಟಿ ಈಗ, ಈ ಹಾಡಿಗೆ ಸಂಬಂಧಿಸಿದಂತೆ ಸ್ಪಷ್ಟನೆತೊಂದನ್ನು ನೀಡುವ ಮೂಲಕ ಎಲ್ಲಾ ರೀತಿಯ ವದಂತಿಗಳಿಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ.
ನನ್ನ ಇತ್ತೀಚಿನ ಮೈಮಾಟ (MAIMATA) ಹಾಡಿನ ಆರಂಭದಲ್ಲೇ ತಿಳಿಸಿರುವಂತೆ, ಈ ಹಾಡನ್ನು ಕೇವಲ ಮನರಂಜನೆಗಾಗಿ ರಚಿಸಲಾಗಿದ್ದು, ಯಾರನ್ನೂ ನೋಯಿಸುವ ಅಥವಾ ಗುರಿಯಾಗಿಸುವ ಉದ್ದೇಶ ಹೊಂದಿಲ್ಲ. ಈ ರೀತಿಯ ಹೊಸ ಸಂಗೀತ ಶೈಲಿಯನ್ನು ಪ್ರಯತ್ನಿಸಬೇಕೆಂಬ ಆಸೆ ನನಗೆ ಬಹಳ ಹಿಂದಿನಿಂದಲೂ ಇತ್ತು. ನನ್ನ ವೈಯಕ್ತಿಕ ಜೀವನದಲ್ಲಿ ನಡೆದ ಕೆಲವು ಘಟನೆಗಳಿಗೂ ಮೊದಲೇ ಈ ಹಾಡನ್ನು ಸಿದ್ಧಪಡಿಸಲಾಗಿತ್ತು.
ಆದರೆ, ಇತ್ತೀಚೆಗೆ ಕೆಲವು ಸುದ್ದಿ ಮಾಧ್ಯಮಗಳಲ್ಲಿ, ಯೂಟ್ಯೂಬ್ ಚಾನೆಲ್‌ಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಈ ಹಾಡನ್ನು ನನ್ನ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಬಿಂಬಿಸಲಾಗುತ್ತಿದೆ. ಈ ಬಗ್ಗೆ ಅನೇಕ ಪ್ರಶ್ನೆಗಳು ಹಾಗೂ ಊಹಾಪೋಹಗಳು ಕೇಳಿಬರುತ್ತಿರುವುದರಿಂದ ಈ ಸ್ಪಷ್ಟನೆ ನೀಡುತ್ತಿದ್ದೇನೆ.
ದಯವಿಟ್ಟು ಈ ಹಾಡನ್ನು ನನ್ನ ವೈಯಕ್ತಿಕ ಜೀವನದೊಂದಿಗೆ ಹೋಲಿಸಿ ಅನಗತ್ಯ ಊಹಾಪೋಹಗಳು ಹಾಗೂ ನಕಾರಾತ್ಮಕತೆಯನ್ನು ಹರಡಬೇಡಿ ಎಂದು ಎಲ್ಲರಲ್ಲೂ ವಿನಂತಿಸಿಕೊಳ್ಳುತ್ತೇನೆ. ಸಂಗೀತ ಎನ್ನುವುದು ಸೃಜನಶೀಲತೆಯ ಅಭಿವ್ಯಕ್ತಿ. ಪ್ರತಿಯೊಂದು ಹಾಡೂ ಕಲಾವಿದನ ವೈಯಕ್ತಿಕ ಜೀವನದ ಕಥೆಯಾಗಿರಬೇಕೆಂದಿಲ್ಲ. ಈ ಹಾಡಿಗೆ ನೀವು ತೋರಿಸುತ್ತಿರುವ ಅಪಾರ ಪ್ರೀತಿ, ಪ್ರೋತ್ಸಾಹ ಮತ್ತು ಬೆಂಬಲಕ್ಕೆ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿಯೇ ನನಗೆ ಇನ್ನಷ್ಟು ಹೊಸ ಪ್ರಯೋಗಗಳನ್ನು ಮಾಡಲು ಸ್ಫೂರ್ತಿ ಎಂದು ಚಂದನ್ ಶೆಟ್ಟಿ ಬರೆದುಕೊಂಡಿದ್ದಾರೆ.
ಚಂದನ್ ಶೆಟ್ಟಿ ಬಿಡಿಗಡೆ ಮಾಡಿರುವ ಈ ಮೈಮಾಟ ಹಾಡಿನಲ್ಲಿ ಒಂದು ಹುಡುಗಿಯ ಬಗ್ಗೆ, ಆಕೆಯ ಚಾರಿತ್ರ್ಯದ ಬಗ್ಗೆ ವರ್ಣನೆ ಮಾಡಲಾಗಿದೆ. ಈ ಹಾಡನ್ನು ಚಂದನ್ ಶೆಟ್ಟಿ ತಮ್ಮ ಮಾಜಿ ಪತ್ನಿ ನಿವೇದಿತಾ ಗೌಡ ಅವರನ್ನೇ ಉದ್ದೇಶಿಸಿ ಈ ಹಾಡನ್ನು ಬರೆದಿದ್ದಾರೆ ಎನ್ನವುದು ವದಂತಿಯಾಗಿದೆ. ನಿವೇದಿತಾ ಗೌಡ ಕೂಡ ಸಾಮಾಜಿಕ ಜಾಲತಾಣಗಲ್ಲಿ ಸಖತ್ ಬೋಲ್ಡ್ ಡ್ರೆಸ್ ಹಾಗೂ ಲುಕ್ಗಳಲ್ಲಿ ಕಾಣಿಸುಕೊಳ್ಳುವ ಹಿನ್ನಲೆ ಈ ವದಂತಿಗಳಿಗೆ ಇನ್ನಷ್ಟು ಪುಷ್ಟಿ ಸಿಕ್ಕಿದೆ. ಆದರೆ, ಇದು ಕೇವಲ ಒಂದು ವದಂತಿಯೇ ಹೊರತು, ಸತ್ಯ ಸಂಗತಿ ಅಲ್ಲ. ಆದರೆ, ಈ ವದಂತಿ ಬಹಳ ವೇಗವಾಗಿ ಹರಡುತ್ತಿರುವ ಹಿನ್ನಲೆ ಎಚ್ಚೆತ್ತುಕೊಂಡಿರುವ ರ‍್ಯಾಪರ್ ಚಂದನ್ ಶೆಟ್ಟಿ, ಈ ಹಾಡನ್ನು ಒಬ್ಬ ಗಾಯಕನಾಗಿ ನನ್ನ ಅಭಿವ್ಯಕ್ತಿಯನ್ನು ವ್ಯಕ್ತಪಡಿಸಲು ಬಳಸಿಕೊಂಡಿದ್ದೇನೆ ಹೊರತಾಗಿ, ಇದರಲ್ಲಿ ಯಾರನ್ನೂ ಗುರಿಯಾಗಿಸಿಕೊಂಡಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ, (ಏಜೆನ್ಸೀಸ್).