ಅಂದಹಾಗೆ, 'ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾವು ನಿನ್ನೆಯಷ್ಟೇ ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದು ಸ್ವಾತಂತ್ರ್ಯ ಪೂರ್ವದ ಗೋವಾ ಹಿನ್ನೆಲೆಯಲ್ಲಿ, ಕಡಲಾಚೆಯ ಅಪರಾಧ ಸಾಮ್ರಾಜ್ಯ ಮತ್ತು ಅಂಡರ್ ವರ್ಲ್ಡ್ ಲೋಕದ ಕಥೆಯನ್ನು ಒಳಗೊಂಡಿದೆ. ಈ ಚಿತ್ರದಲ್ಲಿ ಯಶ್ ಅವರು ರಾಯಾ ಮತ್ತು ಟಿಕೆಟ್ ಹೆಸರಿನ ದ್ವಿಪಾತ್ರದಲ್ಲಿ ಅಭಿನಯಿಸಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. ಬೃಹತ್ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರವು ತನ್ನ ವಿಭಿನ್ನ ಶೈಲಿಯ ಕಥೆ ಮತ್ತು ರಕ್ತಸಿಕ್ತ ಆಕ್ಷನ್ ದೃಶ್ಯಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದೆ. ಮೊದಲ ದಿನವೇ 100 ಕೋಟಿ ರೂ.ಗೆ ಅಧಿಕ ಕಲೆಕ್ಷನ್ ಮಾಡಿ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿದೆ, (ಏಜೆನ್ಸೀಸ್).