

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಮೈಕಲ್ ಮಧು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೈಕಲ್ ಮಧು ಅವರು ಇಂದು ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ಕುಳಿತಿದ್ದಾಗ ಒಮ್ಮೆಲೆ ಕೆಳಗೆ ಬಿದ್ದು ನರಳಾಡಿದ್ದರು. ಕೂಡಲೆ ಅವರನ್ನು ಕಿಮ್ಸ್ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಾಳೆ ಬೆಳಗ್ಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ಇದನ್ನೂ ಓದಿ: ಒಂದೇ ದಿನ 10 ಸಾವಿರ ರೂ.ದಂಡ!
90ರ ದಶಕದಲ್ಲಿ ಸಿನಿಮಾ ರಂಗ ಪ್ರವೇಶ ಮಾಡಿದ ನಟ ಮೈಕಲ್ ಮಧು 90ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಮುಖ್ಯವಾಗಿ ಸೂರ್ಯವಂಶ , ಓಂ, ಶ್ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದರು.
ಇದನ್ನೂ ಓದಿ: ‘ಸಯ್ಯಾ … ಸಯ್ಯಾ …’ ಅಂತಿದ್ದಾರೆ ಮನು