

ಬೆಂಗಳೂರು: ಮೂರು ವರ್ಷಗಳ ಹಿಂದೆ ಬಿಡುಗಡೆಯಾದ ಲಿಖಿತ್ ಶೆಟ್ಟಿ ಅಭಿನಯದ ‘ಸಂಕಷ್ಟಕರ ಗಣಪತಿ’ ಚಿತ್ರವು ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಅದಕ್ಕೆ ಕಾರಣ, ಚಿತ್ರದ ವಿಭಿನ್ನ ಪರಿಕಲ್ಪನೆ. ಏಲಿಯನ್ ಹ್ಯಾಂಡ್ ಸಿಂಡ್ರೋಮ್ ಎಂಬ ಸಮಸ್ಯೆಯ ಸುತ್ತ ಸಾಗುವ ಈ ಚಿತ್ರವು ಇದೀಗ ಹಿಂದಿಗೆ ರಿಮೇಕ್ ಆಗುತ್ತಿದೆ.
‘ಕಾರ್ವಾನ್’ ಮತ್ತು ‘ರಶ್ಮಿ ರಾಕೆಟ್’ ಚಿತ್ರಗಳ ಖ್ಯಾತಿಯ ಆಕರ್ಷ್ ಖುರಾನಾ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ‘ಬಾಯೆ ಹಾಥ್ ಕಾ ಖೇಲ್’ ಎಂಬ ಹೆಸರನ್ನು ಇಡಲಾಗಿದೆ. ‘ಸಂಕಷ್ಟಕರ ಗಣಪತಿ’ ಚಿತ್ರವನ್ನು ಕನ್ನಡದಲ್ಲಿ ಅರ್ಜುನ್ ಕುಮಾರ್ ನಿರ್ದೇಶಿಸಿದ್ದರು.