

ಬೆಂಗಳೂರು: ಶರ್ಮಿಳಾ ಮಾಂಡ್ರೆ ಅವರಿಗೆ ತಮಿಳು ಚಿತ್ರರಂಗ ಹೊಸದಲ್ಲ. ಈ ಹಿಂದೆ ಅವರು "ಮಿರತ್ತಲ್' ಎಂಬ ಚಿತ್ರದಲ್ಲಿ ನಟಿಸಿದ್ದರು. ಈಗ 10 ವರ್ಷಗಳ ನಂತರ "ಮರ್ಡರ್ ಲೈವ್' ಎಂಬ ಇನ್ನೊಂದು ಚಿತ್ರದಲ್ಲಿ ನಟಿಸಿದ್ದಾರೆ.
ಇದೊಂದು ದ್ವಿಭಾಷಾ ಚಿತ್ರವಾಗಿದ್ದು, ತಮಿಳಲ್ಲದೆ ಕನ್ನಡದಲ್ಲೂ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. "ಮರ್ಡರ್ ಲೈವ್' ಸೈಕಲಾಜಿಕಲ್ ಕೆಮ್ ಥ್ರಿಲ್ಲರ್ ಚಿತ್ರವಾಗಿದ್ದು, ಒಬ್ಬ ಸೈಕೋ ಕಿಲ್ಲರ್ ಮತ್ತು ನಾಲ್ವರು ಮಹಿಳೆಯರ ಸುತ್ತ ಕಥೆ ಸುತ್ತುತ್ತದೆ. ಮುರುಗೇಶ್ ನಿರ್ದೇಶನದಲ್ಲಿ ಚಿತ್ರ ಮೂಡಿಬಂದಿದೆ.