

ಬೆಂಗಳೂರು: ಬಹುಶಃ ಲಾಕ್ಡೌನ್ ಘೋಷಣೆಯಾಗದಿದ್ದರೆ, ಶಿವರಾಜಕುಮಾರ್ ಅಭಿನಯದ ‘ಶಿವಪ್ಪ’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಇಷ್ಟರಲ್ಲಿ ಮುಗಿದು, ಮುಂದಿನ ತಿಂಗಳಿನಿಂದ ಹೊಸ ಚಿತ್ರ ಪ್ರಾರಂಭವಾಗಬೇಕಿತ್ತು. ಆದರೆ, ಲಾಕ್ಡೌನ್ನಿಂದಾಗಿ ಅವರ 124ನೇ ಚಿತ್ರ ಇದೀಗ ಜೂನ್ನಲ್ಲಿ ಪ್ರಾರಂಭವಾಗಲಿದೆ.
ಶಿವರಾಜಕುಮಾರ್ ಅಭಿನಯದ ಈ ಚಿತ್ರವನ್ನು ಕಳೆದ ವರ್ಷವೇ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಘೋಷಿಸಲಾಗಿತ್ತು. ಈ ಚಿತ್ರವನ್ನು ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ವಿುಸುತ್ತಿದ್ದು, ಕುಡಿಪುಡಿ ವಿಜಯಕುಮಾರ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರದ ನಿರ್ದೇಶಕರು ಯಾರೆಂದು ಇನ್ನಷ್ಟೇ ಘೋಷಣೆಯಾಗಬೇಕಿದ್ದು, ಶಿವರಾಜಕುಮಾರ್ಗೆ ಯಾರು ಆಕ್ಷನ್-ಕಟ್ ಹೇಳುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.
70ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಜಮ್ಮು ಹಾಗೂ ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದ್ದು, ನಾಜರ್, ಸಂಪತ್, ಸಾಧು ಕೋಕಿಲ ಸೇರಿದಂತೆ ಹಲವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಇನ್ನು, ‘ರಾಬರ್ಟ್’ ಖ್ಯಾತಿಯ ಗಾಯಕಿ ಮಂಗ್ಲಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ರವಿಕುಮಾರ್ ಸನಾ ಛಾಯಾಗ್ರಹಣವಿರುವ ಈ ಚಿತ್ರಕ್ಕೆ, ‘ಟಗರು’ ಖ್ಯಾತಿಯ ಚರಣ್ರಾಜ್ ಸಂಗೀತ ಸಂಯೋಜಿಸುತ್ತಿದ್ದಾರೆ.
ಇನ್ನೂ ಹೆಸರಿಡದ ಈ ಚಿತ್ರದ ಚಿತ್ರೀಕರಣ ಜೂನ್ನಲ್ಲಿ ಪ್ರಾರಂಭವಾಗಿ, ಇದೇ ವರ್ಷ ಮುಕ್ತಾಯವಾಗುವ ಸಾಧ್ಯತೆ ಇದೆ. ಇನ್ನು, ಇದರ ನಂತರ ಶಿವರಾಜಕುಮಾರ್ ಅಭಿನಯದ 125ನೇ ಚಿತ್ರ ‘ವೇದ’ ಪ್ರಾರಂಭವಾಗಲಿದೆ. ಈ ಚಿತ್ರದ ಮೂಲಕ ಗೀತಾ ಶಿವರಾಜಕುಮಾರ್ ನಿರ್ವಪಕರಾಗುತ್ತಿದ್ದು, ಗೀತಾ ಪಿಕ್ಚರ್ಸ್ ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಮಭಿಸಿ, ಅದರಡಿ ಈ ಚಿತ್ರ ನಿರ್ವಿುಸುತ್ತಿದ್ದಾರೆ. ‘ವೇದ’ ಚಿತ್ರವನ್ನು ಎ. ಹರ್ಷ ನಿರ್ದೇಶಿಸಲಿದ್ದಾರೆ.