

ಬೆಂಗಳೂರು: ಬಾಲಿವುಡ್ ನಟ ಸೋನು ಸೂದ್ ಮೊದಲ ಬಾರಿಗೆ 'ಶ್ರೀಮಂತ' ಎಂಬ ಚಿತ್ರದಲ್ಲಿ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಷಯ ಗೊತ್ತಿರಬಹುದು. ಈ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದ್ದು, ಇತ್ತೀಚೆಗೆ ಟ್ರೇಲರ್ ಸಹ ಬಿಡುಗಡೆಯಾಗಿದೆ.
ಇದನ್ನೂ ಓದಿ: ಅಮೆರಿಕಾದಲ್ಲಿ ‘ಚೌಕಾಬಾರ’; ಮಾರ್ಚ್ 24ರಿಂದ ಪ್ರದರ್ಶನ
ನಾವು ಎಷ್ಟೇ ಮುಂದುವರಿದರೂ ರೈತನ ಕೊಡುಗೆ ಬಹಳ ಮುಖ್ಯ ಎಂಬ ಸಂದೇಶದ ಜೊತೆ ರೈತನ ಬದುಕು, ಬವಣೆಗಳನ್ನು ಸಾರುವ ಈ ಚಿತ್ರವನ್ನು ನಾರಾಯಣಪ್ಪ, ಸಂಜಯ್ ಬಾಬು ಹಾಗೂ ಹಾಸನ್ ರಮೇಶ್ ನಿರ್ಮಿಸಿದ್ದಾರೆ. ಇನ್ನು, ಹಾಸನ್ ರಮೇಶ್ ನಿರ್ದೇಶಿಸಿರುವ ಈ ಚಿತ್ರಕ್ಕೆ ಡಾ.ಹಂಸಲೇಖ ಅವರು ಸಂಗೀತ ಸಂಯೋಜಿಸಿದ್ದಾರೆ. ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಹಾಡಿರುವ ಕೊನೆಯ ಹಾಡು ಈ ಚಿತ್ರದಲ್ಲಿದೆ. ಕ್ರಾಂತಿ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ನಾಯಕಿಯರಾಗಿ ವೈಷ್ಣವಿ ಪಟವರ್ಧನ್ ಹಾಗೂ ವೈಷ್ಣವಿ ಚಂದ್ರನ್ ಮೆನನ್ ಕಾಣಿಸಿಕೊಂಡಿದ್ದಾರೆ.
ಈ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಹಾಸನ್ ರಮೇಶ್, 'ಹಣ ಇರುವವರು ಮಾತ್ರವೇ ಶ್ರೀಮಂತರಲ್ಲ. ನಿಜವಾದ ಆರ್ಥದಲ್ಲಿ ಶ್ರೀಮಂತ ಎಂದರೆ ರೈತ. ಎಲ್ಲ ರೀತಿಯಿಂದಲೂ ರೈತನೇ ಶ್ರೀಮಂತ ಎನ್ನುವ ಅಭಿಪ್ರಾಯ ಎಲ್ಲರಿಂದಲೂ ಬಂದಿದೆ. ರೈತ ಒಬ್ಬ ವ್ಯಕ್ತಿಯಲ್ಲ, ಶಕ್ತಿ. ಆತನದು ಸಂಭ್ರಮದ ಬದುಕು ಎಂದು ಶ್ರೀಮಂತ ಚಿತ್ರದ ಮೂಲಕ ಹೇಳಹೊರಟಿದ್ದೇವೆ. ನಮ್ಮ ದೇಶದಲ್ಲಿ ಶೇ.೮೦ರಷ್ಟು ಜನ ರೈತರೇ ಆಗಿದ್ದಾರೆ. ಈ ಅಂಶವನ್ನು ಇಟ್ಟುಕೊಂಡು ಮಾಡಿರುವ ಸಂಗೀತಮಯ ಚಿತ್ರವಿದು. ಇದರಲ್ಲಿ ಮನರಂಜನಾತ್ಮಕ ಅಂಶಗಳೂ ಇವೆ. ಎಂಟು ಗೀತೆಗಳ ಜೊತೆಗೆ ಒಗಟು, ಗಾದೆಗಳೂ ಚಿತ್ರದಲ್ಲಿವೆ' ಎಂದು ಹೇಳಿದರು.
'ಶ್ರೀಮಂತ' ಚಿತ್ರದಲ್ಲಿ ಸಾಧು ಕೋಕಿಲ, ರಮೇಶ್ ಭಟ್, ಕುರಿ ರಂಗ ಮುಂತಾದವರು ನಟಿಸಿ್ದು, ಕೆ.ಎಂ.ವಿಷ್ಣುವರ್ಧನ್ ಹಾಗೂ ರವಿಕುಮಾರ್ ಸನಾ ಛಾಯಾಗ್ರಹಣವಿದೆ.