ಸೋಮವಾರದೊಳಗೆ ಎಸ್​ಪಿಬಿ ಡಿಸ್ಚಾರ್ಜ್?

SPB
Published on

ಚೆನ್ನೈ: ಕರೊನಾ ಸೋಂಕಿಗೆ ತುತ್ತಾಗಿರುವ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಈ ವಾರಾಂತ್ಯ ಅಥವಾ ಮುಂದಿನ ವಾರದ ಆರಂಭದಲ್ಲಿ ಶುಭಸುದ್ದಿಯೊಂದು ಇದೆ ಎಂದು ಅವರ ಪುತ್ರ ಎಸ್. ಚರಣ್ ತಿಳಿಸಿದ್ದಾರೆ.

ಎಸ್​ಪಿಬಿ ಅವರಿಗೆ ಆಗಸ್ಟ್ 5ರಂದು ಸೋಂಕು ದೃಢವಾಗಿದ್ದು, ಅದೇ ದಿನ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರವಾಗಿ, ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆಗಸ್ಟ್ 28ರಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಸದ್ಯದಲ್ಲೇ ಅವರು ಡಿಸ್ಚಾರ್ಜ್ ಆಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net