'ಉಸಿರೇ ಉಸಿರೇ' ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ ಕಿಚ್ಚ ಸುದೀಪ್

usire usire
Published on

ಬೆಂಗಳೂರು: ರಾಜೀವ್ ಹನು ನಾಯಕನಾಗಿ ಹಾಗೂ ಶ್ರೀಜಿತಾ ೋಷ್ ನಾಯಕಿಯಾಗಿ ಅಭಿನಯಿಸುತ್ತಿರುವ, ಸಿ.ಎಂ. ವಿಜಯ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ ‘ಉಸಿರೇ ಉಸಿರೇ’.

ಇದೊಂದು ನವಿರಾದ ಪ್ರೇಮಕಥಾಹಂದರದ ಸಿನಿಮಾ. ಇತ್ತೀಚೆಗಷ್ಟೆ ಚಿತ್ರದ ಶೀರ್ಷಿಕೆ ಗೀತೆ ಅನಾವರಣ ಮಾಡಲಾಗಿತ್ತು. ತೆಲುಗಿನ ಸ್ಟಾರ್ ಕಲಾವಿದರಾದ ಬ್ರಹ್ಮಾನಂದಂ ಹಾಗೂ ಅಲಿ ಕೂಡ ಚಿತ್ರದಲ್ಲಿ ಬಣ್ಣ ಹಚ್ಚಿರುವುದು ವಿಶೇಷ. ಜತೆಗೆ ಚಿತ್ರದ ವಿಶೇಷ ಪಾತ್ರದಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಳ್ಳಲಿದ್ದು, ಇತ್ತೀಚೆಗಷ್ಟೆ ಅವರ ಭಾಗದ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಚಿತ್ರ ಅಕ್ಟೋಬರ್‌ನಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ ಎಂದು ಹೇಳಿಕೊಂಡಿದೆ ಚಿತ್ರತಂಡ.

ದೇವರಾಜ್, ಸಾಧುಕೋಕಿಲ, ಮಂಜು ಪಾವಗಡ, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಶೈನಿಂಗ್ ಸೀತಾರಾಮು, ಜಗಪ್ಪ, ಸುಶ್ಮಿತಾ ಮುಖ್ಯ ತಾರಾಗಣದಲ್ಲಿದ್ದಾರೆ. ಜತೆಗೆ ಚಿತ್ರಕ್ಕೆ ಮನು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ, ವಿವೇಕ್ ಚಕ್ರವರ್ತಿ ಸಂಗೀತವಿರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net